Webdunia - Bharat's app for daily news and videos

Install App

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕಾಲಿಗೆ ಬೆಂಕಿ ಹಚ್ಚಿದ ದುರುಳರು

Webdunia
ಮಂಗಳವಾರ, 7 ಜೂನ್ 2016 (14:24 IST)
ಇಬ್ಬರು ಕಾಮುಕರು ನನ್ನ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಕಾಲುಗಳನ್ನು ಸುಟ್ಟುಹಾಕಿದ್ದಾರೆ ಎಂದು 13 ವರ್ಷದ ಬಾಲಕಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
 
ಘಟನೆ ನಡೆದು ಆರು ತಿಂಗಳಾದರೂ ಪೊಲೀಸರು ಜೂನ್ 5 ರಂದು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.  
 
ಕಳೆದ ವರ್ಷದ ಡಿಸೆಂಬರ್ 31 ರಂದು ಇಬ್ಬರು ವ್ಯಕ್ತಿಗಳು  ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಾರನೇ ದಿನ ಜನೆವರಿ 1 ರಂದು ಪೊಲೀಸ್ ಠಾಣೆಗೆ ದೂರು ನೀಡಲು ತೆರಳುತ್ತಿದ್ದಾಗ ಆರೋಪಿಗಳು ಮತ್ತು ಅವರ ಸಹೋದರಿಯರು ನಮ್ಮ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಡೀಸೆಲ್ ಸುರಿದು ಕಾಲುಗಳಿಗೆ ಬೆಂಕಿ ಹಚ್ಚಿದ್ದರು ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. 
 
ಆರೋಪಿಗಳು ಪದೇ ಪದೇ ಜೀವಬೆದರಿಕೆಯೊಡ್ಡುತ್ತಿದ್ದರಿಂದ ಬಾಲಕಿಗೆ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸಾಧ್ಯವಾಗಲಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.
 
ನನ್ನ ಕಾಲುಗಳಿಗೆ ಬೆಂಕಿ ಹಚ್ಚಿದಂತೆ ಪೋಷಕರಿಗೆ ಅದೇ ಗತಿಯಾಗಲಿದೆ ಎಂದು ಆರೋಪಿಗಳು ಹೆದರಿಸಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಬಾಲಕಿ ತಿಳಿಸಿದ್ದಾಳೆ.
 
ಕೊನೆಗೂ ನೆರೆಮನೆಯ ವ್ಯಕ್ತಿಯೊಬ್ಬ ಪೋಷಕರಿಗೆ ಧೈರ್ಯ ತುಂಬಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ಕರೆದುಕೊಂಡು ಹೋದಾಗ ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.  
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments