Select Your Language

Notifications

webdunia
webdunia
webdunia
webdunia

ಖಾಸಗಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಮೇಲೆ ರೇಪ್‌: ಐವರು ಶಿಕ್ಷಕರು ಅಂದರ್‌

Girl raped, teacher arrested, Odisha Police
Photo Courtesy X
ಭುವನೇಶ್ವರ: ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾವೆಸಗಿದ ಆರೋಪದ ಮೇಲೆ ಐವರು ಶಿಕ್ಷಕರನ್ನು ಬಂಧಿಸಿದ್ದಾರೆ.

ಸಂತ್ರಸ್ತ ಬಾಲಕಿಯ ತಂದೆ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ರಾಜ್ ಕನಿಕಾ ಪೊಲೀಸ್ ಠಾಣೆಗೆ ಸಲ್ಲಿಸಿದ ಪ್ರತ್ಯೇಕ ದೂರುಗಳನ್ನು ಆಧರಿಸಿ ಈ ಐವರು ಶಾಲಾ ಶಿಕ್ಷಕರನ್ನು ಬಂಧಿಸಲಾಗಿದೆ. ಆರೋಪಿತ ಶಿಕ್ಷಕರು ತನ್ನ ಮೇಲೆ ದೀರ್ಘಕಾಲದಿಂದ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂದು ತಮ್ಮ ಪುತ್ರಿಯು ಆರೋಪಿಸಿದ ಬಳಿಕ, ಆಕೆಯ ಪೋಷಕರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೊರೆ ಹೋಗಿದ್ದರು ಎಂದು ‌ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಫೆಬ್ರವರಿ 18ರಂದು ದೂರು ದಾಖಲಿಸಿಕೊಳ್ಳಲಾಗಿದೆ. 48 ಗಂಟೆಗಳ ಕಾಲ ತನಿಖೆ ನಡೆಸಿದ ಬಳಿಕ, ಈ ಕುರಿತು ಕಾನೂನು ಕ್ರಮ ಜರುಗಿಸಲು ನಾವು ಪೊಲೀಸರಿಗೆ ಶಿಫಾರಸು ಮಾಡಿದೆವು ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಸ್ವಾಗತಿಕಾ ಪಾತ್ರಾ ಹೇಳಿದ್ದಾರೆ. ಈ ಆರೋಪಗಳ ಕುರಿತು ಪ್ರತ್ಯೇಕ ತನಿಖೆ ನಡೆಸುವಂತೆ ಜಿಲ್ಲಾ ಶಿಕ್ಷಣಾಧಿಕಾರಿಗೆ ಸಮಿತಿಯು ಸೂಚಿಸಿದೆ ಎಂದೂ ಅವರು ತಿಳಿಸಿದ್ದಾರೆ.

ದೂರುಗಳನ್ನು ಆಧರಿಸಿ, ಕಾನೂನು ನಿಯಮಗಳ ಪ್ರಕಾರ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ಹಾಗೂ ಸಂತ್ರಸ್ತ ಬಾಲಕಿಯು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಪ್ರಾಥಮಿಕ ತನಿಖೆಯನ್ನು ಆಧರಿಸಿ ಶಿಕ್ಷಕರನ್ನು ಬಂಧಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿ ಸಾವು