Daily Horoscope
✕

ಖಾಸಗಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಮೇಲೆ ರೇಪ್‌: ಐವರು ಶಿಕ್ಷಕರು ಅಂದರ್‌

Sampriya
ಭಾನುವಾರ, 22 ಫೆಬ್ರವರಿ 2026 (12:58 IST)
Photo Courtesy X
ಭುವನೇಶ್ವರ: ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾವೆಸಗಿದ ಆರೋಪದ ಮೇಲೆ ಐವರು ಶಿಕ್ಷಕರನ್ನು ಬಂಧಿಸಿದ್ದಾರೆ.

ಸಂತ್ರಸ್ತ ಬಾಲಕಿಯ ತಂದೆ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ರಾಜ್ ಕನಿಕಾ ಪೊಲೀಸ್ ಠಾಣೆಗೆ ಸಲ್ಲಿಸಿದ ಪ್ರತ್ಯೇಕ ದೂರುಗಳನ್ನು ಆಧರಿಸಿ ಈ ಐವರು ಶಾಲಾ ಶಿಕ್ಷಕರನ್ನು ಬಂಧಿಸಲಾಗಿದೆ. ಆರೋಪಿತ ಶಿಕ್ಷಕರು ತನ್ನ ಮೇಲೆ ದೀರ್ಘಕಾಲದಿಂದ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂದು ತಮ್ಮ ಪುತ್ರಿಯು ಆರೋಪಿಸಿದ ಬಳಿಕ, ಆಕೆಯ ಪೋಷಕರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೊರೆ ಹೋಗಿದ್ದರು ಎಂದು ‌ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಫೆಬ್ರವರಿ 18ರಂದು ದೂರು ದಾಖಲಿಸಿಕೊಳ್ಳಲಾಗಿದೆ. 48 ಗಂಟೆಗಳ ಕಾಲ ತನಿಖೆ ನಡೆಸಿದ ಬಳಿಕ, ಈ ಕುರಿತು ಕಾನೂನು ಕ್ರಮ ಜರುಗಿಸಲು ನಾವು ಪೊಲೀಸರಿಗೆ ಶಿಫಾರಸು ಮಾಡಿದೆವು ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಸ್ವಾಗತಿಕಾ ಪಾತ್ರಾ ಹೇಳಿದ್ದಾರೆ. ಈ ಆರೋಪಗಳ ಕುರಿತು ಪ್ರತ್ಯೇಕ ತನಿಖೆ ನಡೆಸುವಂತೆ ಜಿಲ್ಲಾ ಶಿಕ್ಷಣಾಧಿಕಾರಿಗೆ ಸಮಿತಿಯು ಸೂಚಿಸಿದೆ ಎಂದೂ ಅವರು ತಿಳಿಸಿದ್ದಾರೆ.

ದೂರುಗಳನ್ನು ಆಧರಿಸಿ, ಕಾನೂನು ನಿಯಮಗಳ ಪ್ರಕಾರ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ಹಾಗೂ ಸಂತ್ರಸ್ತ ಬಾಲಕಿಯು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಪ್ರಾಥಮಿಕ ತನಿಖೆಯನ್ನು ಆಧರಿಸಿ ಶಿಕ್ಷಕರನ್ನು ಬಂಧಿಸಲಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಸೀಸನ್ ಆರಂಭ: ಚಿನ್ನದ ಬೆಲೆ ಮತ್ತೆ ಗಗನಕ್ಕೇರಲಿದೆಯೇ, ಮಾರುಕಟ್ಟೆ ತಜ್ಞರ ಲೆಕ್ಕಾಚಾರ ಏನು

ಕರ್ನಾಟಕ ರಾಜ್ಯ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ತಂದುಕೊಡುವ ಕ್ಷೇತ್ರ ಯಾವುದು

ಮಹಿಳೆಯರ ಹೆಸರಲ್ಲಿ ಸೈಟ್ ಖರೀದಿ: ಯಾವ ಲಾಭಗಳು ಸಿಗುತ್ತವೆ, ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳೇನು

ಕಬ್ಬು ಬೆಳೆಗಾರರ ಹೋರಾಟ, ಬರ, ಮತಾಂತರ ಕಾಯ್ದೆ ವಿವಾದ: ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಲಿರುವ 5 ಪ್ರಮುಖ ಅಂಶಗಳು

Karnataka Weather: ಇಂದು ಸಂಜೆ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗುವ ಸೂಚನೆ

ಮುಂದಿನ ಸುದ್ದಿ