Publish Date: Mon, 03 Dec 2018 (07:19 IST)
Updated Date: Mon, 03 Dec 2018 (07:21 IST)
ಮುಜಾಫರ್ ನಗರ : 14 ವರ್ಷದ ಬಾಲಕನೊಬ್ಬ 8 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.
ಬಾಲಕಿ ತನ್ನ ಇಬ್ಬರು ಗೆಳೆಯರೊಂದಿಗೆ ಕಳೆದ ಶುಕ್ರವಾರ ಆಟವಾಡಲು ತೆರಳಿದ್ದ ವೇಳೆ ಯುವಕನೊಬ್ಬ ಬಲವಂತವಾಗಿ ಆಕೆಯನ್ನ ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಂದೆ ಬಾಲಕನ ವಿರುದ್ಧ ಸಿಖೆಡಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈಗಾಗಲೇ ಬಾಲಕನ ಬಂಧನ ಮಾಡಲಾಗಿದ್ದು, ಇತ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.