Publish Date: Fri, 29 Sep 2017 (12:28 IST)
Updated Date: Fri, 29 Sep 2017 (12:30 IST)
ಮುಂಬೈ: ಮುಂಬೈನ ಎಲ್ಫಿಲ್ಟನ್ ರೈಲ್ವೇ ಸೇತುವೆಯಲ್ಲಿ ಇಂದು ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಜೋರಾಗಿ ಮಳೆ ಸುರಿಯುತ್ತಿದ್ದರಿಂದ, ಮಳೆಯಿಂದ ರಕ್ಷಣೆ ಪಡೆಯಲು ಸೇತುವೆ ಬಳಿಗೆ ಓಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ ಸುಮಾರು 10.45 ರ ಸುಮಾರಿಗೆ ಈ ಘಟನೆ ನಡೆದಿದೆ.
ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಾವು ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗಿದೆ. ಇದೀಗ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಭರದಿಂದ ಸಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ