Select Your Language

Notifications

webdunia
webdunia
webdunia
webdunia

16 ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ !

ಪೋಕ್ಸೊ
ಮುಂಬೈ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬ ಮರ್ಚೆಂಟ್ ನೇವಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ, ಮತ್ತೊಬ್ಬ ಹಿಸ್ಟರಿ ಶೀಟರ್ ಆಗಿದ್ದಾನೆ. ಆಗಸ್ಟ್ 26 ರಂದು ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  

ಶುಕ್ರವಾರ ಮಧ್ಯಾಹ್ನ ಆರೋಪಿಗಳು ಬಾಲಕಿಯನ್ನು ಭಿವಂಡಿಯ ಕಲ್ಹೇರ್ನಲ್ಲಿರುವ ಫ್ಲಾಟ್ಗೆ ಕರೆದೊಯ್ದರು. ಬಾಲಕಿ ಕೈಗಳನ್ನು ಕಟ್ಟಿಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಣೆ ನಗರದ ವಾಗ್ಲೆ ಎಸ್ಟೇಟ್ ವಿಭಾಗದ ಚಿತಾಲ್ಸರ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಸಚಿನ್ ಕಾಂಬ್ಳೆ (30), ಆಕಾಶ್ ಕನೋಜಿಯಾ (22) ಮತ್ತು ಅಸು (20) ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿಗಳು ವಾಗ್ಲೆ ಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿದ್ದರು.

ಮೂವರು ಆರೋಪಿಗಳ ವಿರುದ್ಧ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಆ.31ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ