Select Your Language

Notifications

webdunia
webdunia
webdunia
webdunia

16ನೇ ವಯಸ್ಸಿನವ್ರಿಗೆ ಲೈಂಗಿಕ ವಿಚಾರದ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವಿದೆ : ಮೇಘಾಲಯ ಹೈಕೋರ್ಟ್

16ನೇ ವಯಸ್ಸಿನವ್ರಿಗೆ ಲೈಂಗಿಕ ವಿಚಾರದ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವಿದೆ : ಮೇಘಾಲಯ ಹೈಕೋರ್ಟ್
ಶಿಲ್ಲಾಂಗ್ , ಸೋಮವಾರ, 26 ಜೂನ್ 2023 (10:57 IST)
ಶಿಲ್ಲಾಂಗ್ : 16 ವರ್ಷ ವಯಸ್ಸಿನವರು ಲೈಂಗಿಕ ವಿಚಾರದ ಬಗ್ಗೆ ತಮ್ಮದೇ ಆದ ಪ್ರಜ್ಞಾಪೂರ್ವಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಮೇಘಾಲಯ ಹೈಕೋರ್ಟ್ ಹೇಳಿದೆ.

ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿಯೆಂಗ್ಡೋ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅರ್ಜಿದಾರರು ಮತ್ತು ಆಪಾದಿತ ಸಂತ್ರಸ್ತೆ ಪ್ರೀತಿಸುತ್ತಿದ್ದರಿಂದ ಇದು ಲೈಂಗಿಕ ದೌರ್ಜನ್ಯದ ಕೃತ್ಯವಲ್ಲ. ಸಂಪೂರ್ಣವಾಗಿ ಸಮ್ಮತಿಯಿಂದ ನಡೆದ ಕ್ರಿಯೆ ಎಂದು ಮನವಿಯಲ್ಲಿ ಹೇಳಲಾಗಿದೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ. 

ನ್ಯಾಯಾಲಯವು ಹದಿಹರೆಯದವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಪರಿಶೀಲಿಸುತ್ತದೆ. ಅಂತಹ ವ್ಯಕ್ತಿಯು ತನ್ನ ಬಗ್ಗೆ ಪ್ರಜ್ಞಾಪೂರ್ವಕ ನಿರ್ಧಾರವನ್ನು ತೆಗೆದುಕೊಳ್ಳಲು ಸಮರ್ಥನಾಗಿದ್ದಾರೆಯೇ ಎಂಬುದನ್ನು ಪರಿಗಣಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : ಸಿದ್ದರಾಮಯ್ಯ