Select Your Language

Notifications

webdunia
webdunia
webdunia
webdunia

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

India’s health authorities

Sampriya

ನವದೆಹಲಿ , ಗುರುವಾರ, 9 ಅಕ್ಟೋಬರ್ 2025 (19:40 IST)
Photo Credit X
ನವದೆಹಲಿ: ಕೆಮ್ಮಿನ ಸಿರಪ್‌ನಿಂದ 17ಮಕ್ಕಳು ಸಾವನ್ನಪ್ಪಿದ ಬಳಿಕ ಎಚ್ಚೆತ್ತ ವಿಶ್ವ ಆರೋಗ್ಯ ಸಂಸ್ಥೆ ಕೋಲ್ಡ್ರಿಫ್‌, ರೆಸ್ಪಿಫ್ರೆಶ್‌ ಟಿಆರ್‌ ಹಾಗೂ ರಿಲೈಫ್‌ ಕೆಮ್ಮಿನ ಸಿರಪ್‌ಗಳನ್ನು ಮಾರುಕಟ್ಟೆಗಳಿಂದ ವಾಪಸು ತರಿಸಿಕೊಳ್ಳಲು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು (ಸಿಡಿಎಸ್‌ಸಿಒ) ತಿಳಿಸಿದೆ.

ಇವುಗಳ ಪೈಕಿ ಯಾವ ಸಿರಪ್‌ಅನ್ನು ಕೂಡ ಇತರ ದೇಶಗಳಿಗೆ ರಫ್ತು ಮಾಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ ಸಿಡಿಎಸ್‌ಸಿಒ ಬುಧವಾರ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದ ಕೆಮ್ಮಿನ ಸಿರಪ್‌ಗಳನ್ನು ವಿದೇಶಗಳಿಗೆ ರಫ್ತು ಮಾಡಲಾಗಿದೆಯೇ ಎಂಬುದನ್ನು ಭಾರತಕ್ಕೆ ಕೇಳಿದೆ. 

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಸಂಭವಿಸಿದ ಮಕ್ಕಳ ಸಾವುಗಳ ಕುರಿತು ಇತ್ತೀಚಿಗೆ ಭಾರತದ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ. ಹೀಗಾಗಿ, ಈ ಕುರಿತು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದೂ ಡಬ್ಲುಎಚ್‌ಒ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್