ಕಳೆದೆರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(69) ಮತ್ತೆ ಆಸ್ಪತ್ರೆ ಸೇರಿದ್ದಾರೆ.
ಬುಧವಾರ ಅವರನ್ನು ಮತ್ತೆ ಶ್ರೀ ಗಂಗಾರಾಮ್ ಆಸ್ಪತ್ರೆಗೆ ಸೇರಿಸಲಾಗಿದೆ.
ಗಂಭೀರವಾದ ಸಮಸ್ಯೆ ಏನೂ ಇಲ್ಲ. ಚೆಕ್-ಅಪ್‌ಗಾಗಿ ಅವರನ್ನು ದಾಖಲಿಸಿಕೊಳ್ಳಲಾಗಿದೆ. ಒಂದು ಅಥವಾ ಎರಡು ದಿನಗಳೊಳಗೆ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆಗಸ್ಟ್ 3 ರಂದು ವಾರಣಾಸಿಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದ ಅವರ ಕೈ ಮೂಳೆ ಮುರಿದಿತ್ತು. 11 ದಿನಗಳ ಕಾಲ ನವದೆಹಲಿಯ ಶ್ರೀಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಕಳೆದ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .