Select Your Language

Notifications

webdunia
webdunia
webdunia
webdunia

ಮುಂಬೈಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರ ಸಾವು

ಕಟ್ಟಡ ಕುಸಿತ
ಮುಂಬೈ , ಭಾನುವಾರ, 7 ಆಗಸ್ಟ್ 2016 (11:46 IST)
ಮುಂಬೈನ ಭಿವಾಂಡಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಘಟನೆ ಭಾನುವಾರ ಮುಮುಂಜಾನೆ ನಡೆದಿದೆ. ಈ ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಕಟ್ಟಡದ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗ್ಲೇ ಇಬ್ಬರನ್ನು ರಕ್ಷಿಸಲಾಗಿದೆ. 
ಕೆಲ ದಿನಗಳ ಹಿಂದಷ್ಟೇ ಸೇತುವೆ ಕುಸಿದು 24ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ದುರ್ಘಟನೆ ಇನ್ನೂ ಮನಸ್ಸಿನಿಂದ ಮಾಸಿಲ್ಲ. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ. ಕಳೆದ ಭಾನುವಾರ ಇದೇ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 8 ಮಂದಿ ಸಾವನ್ನಪ್ಪಿದ್ದರು.
 
ಭಿವಾಂಡಿಯ ಹನುಮಾನ್ ಟೆಕ್ರಿಯಲ್ಲಿ ಘಟನೆ ಸಂಭವಿಸಿದ್ದು, ಕಟ್ಟಡ ಶಿಥಿಲಗೊಂಡಿತ್ತು. ಕೆಲ ಕುಟುಂಬ ಕಟ್ಟಡದಿಂದ ಈಗಾಗ್ಲೇ ನಿರ್ಗಮಿಸಿ ಬೇರೆಡೆ ವಾಸವಾಗಿದ್ದಾರೆ. ಆದ್ರೆ ಕೆಲ ಕುಟುಂಬ ಇಲ್ಲಿಯೇ ವಾಸವಿತ್ತು. ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕದಳ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ನಾಡಿನಾದ್ಯಂತ ಸಂಭ್ರಮದ ನಾಗರಪಂಚಮಿ ಆಚರಣೆ