Select Your Language

Notifications

webdunia
webdunia
webdunia
webdunia

20 ಆಪ್ ಶಾಸಕರು ಅನರ್ಹ: ರಾಷ್ಟ್ರಪತಿ ಕೋವಿಂದ್ ಅಂಕಿತ

20 ಆಪ್ ಶಾಸಕರು ಅನರ್ಹ: ರಾಷ್ಟ್ರಪತಿ ಕೋವಿಂದ್ ಅಂಕಿತ
ಬೆಂಗಳೂರು , ಭಾನುವಾರ, 21 ಜನವರಿ 2018 (16:11 IST)
ಲಾಭದಾಯಕ ಹುದ್ದೆಹೊಂದಿದ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೋವಿಂದ್ 20 ಆಮ್ ಆದ್ಮಿ ಪಕ್ಷದ ಶಾಸಕರನ್ನು ಅನರ್ಹಗೊಳಿಸಿ ಅಂಕಿತ ಹಾಕಿದ್ದಾರೆ.
ಆಮ್ ಆದ್ಮಿ ಪಕ್ಷದ 20 ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂದು ಕೇಂದ್ರ ಚುನಾವಣೆ ಆಯೋಗ ರಾಷ್ಟ್ರಪತಿಯವರಿಗೆ ಶಿಫಾರಸ್ಸು ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಇದೀಗ ಕೋವಿಂದ್ ಅಂಕಿತ ಹಾಕುವುದರೊಂದಿಗೆ 20 ಶಾಸಕರನ್ನು ಶಾಸಕತ್ವ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ.
 
ಕೇಂದ್ರ ಚುನಾವಣೆ ಆಯೋಗದ ಕ್ರಮವನ್ನು ಪ್ರಶ್ನಿಸಿ ಆಪ್ ಪಕ್ಷ ಹೈಕೋರ್ಟ್ ಮೆಟ್ಟಿಲೇರಿತ್ತು. ರಾಷ್ಟ್ರಪತಿ ಕೋವಿಂದ್ ಅವರನ್ನು ಭೇಟಿ ಮಾಡಿ ವಿವರಣೆ ನೀಡಲು ಸಮಯಾವಕಾಶ ಕೋರಿತ್ತು. ಆದರೆ, ತರಾತುರಿಯಲ್ಲಿ ರಾಷ್ಟ್ರಪತಿ ಕೋವಿಂದ್ ಅಂಕಿತ ಹಾಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
 
ಕೇಂದ್ರ ಚುನಾವಣೆ ಆಯೋಗ ಲಾಭದಾಯಕ ಹುದ್ದೆ ಹೊಂದಿದ ಶಾಸಕರ ಅಹವಾಲು ಕೇಳದೆ ಏಕಾಏಕೀ ನಿರ್ಧಾರ ತೆಗೆದುಕೊಂಡು ರಾಷ್ಟ್ರಪತಿಯವರಿಗೆ ಶಿಫಾರಸ್ಸು ಮಾಡಿರುವುದು, ರಾಷ್ಟ್ರಪತಿಗಳು ತರಾತುರಿಯಲ್ಲಿ ಅಂಕಿತ ಹಾಕಿರುವ ಹಿಂದೆ ಪ್ರಧಾನಿ ಮೋದಿಯ ಕೈವಾಡವಿದೆ ಎಂದು ಆಪ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ನಮಗೆ ನ್ಯಾಯ ದೊರೆಯುವುದು ಖಚಿತ ವಿಪಕ್ಷಗಳಿಗೆ ಠೇವಣಿ ಕೂಡಾ ದಕ್ಕುವುದಿಲ್ಲ ಎಂದು ಅಬ್ಬರಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಣ್ಣಿನ ಮಗ ಟೈಟಲ್‌ಗಾಗಿ ಅಪ್ಪ-ಮಗ ಪೈಪೋಟಿ: ಸಿಎಂ ಲೇವಡಿ