Webdunia - Bharat's app for daily news and videos

Install App

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಉಗ್ರ ಅಬು ಜುಂದಾಲ್‌ಗೆ ಜೀವಾವಧಿ ಶಿಕ್ಷೆ

Webdunia
ಮಂಗಳವಾರ, 2 ಆಗಸ್ಟ್ 2016 (14:24 IST)
2006ರ ಔರಂಗಾಬಾದ್ ಅಕ್ರಮ ಶಸ್ತ್ರಾಸ್ತ್ರ ವಶ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಸಯದ್ ಜಬೀಬುದ್ದಿನ್ ಇನ್ಸಾರಿ ಅಲಿಯಾಸ್ ಅಬು ಜಿಂದಾಲ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 
 
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಇಬ್ಬರಿಗೆ ಜೀವಾವಧಿ ಮತ್ತು ಇತರ ಮೂವರು ಅಪರಾಧಿಗಳಿಗೆ ಎಂಟು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದಲ್ಲದೇ ಮೊಕಾ ಕಾಯ್ದೆಯಡಿ ದಂಡವನ್ನು ಕೂಡಾ ಹೇರಿ ತೀರ್ಪು ನೀಡಿದೆ.
 
2006ರ ಔರಂಗಾಬಾದ್ ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮೋಕಾ ಕೋರ್ಟ್ ಕಳೆದ ವಾರ ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ನೀಡಿತ್ತು.  
 
ಮೋಕಾ ಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀಕಾಂತ್ ಅನೇಕರ್, ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಂಟು ಜನರನ್ನು ಅಪರಾಧಿಗಳೆಂದು ಘೋಷಿಸಿದ್ದು, ಇಬ್ಬರು ಆರೋಪಿಗಳ ವಿಚಾರಣೆಯನ್ನು ಪ್ರತ್ಯೇಕವಾಗಿ ನಡೆಸುವಂತೆ ಆದೇಶ ನೀಡಿದ್ದಾರೆ. 
 
ಕಳೆದ 2006ರ ಮೇ 8 ರಂದು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳದ ತಂಡ ಚಾಂದ್‌ವಾಡ್-ಮನ್ಮಾಡ್ ರಸ್ತೆಯಲ್ಲಿ  ಟಾಟಾ ಸುಮೋ ಮತ್ತು ಇಂಡಿಕಾ ಕಾರನ್ನು ಬೆನ್ನಟ್ಟಿ ಮೂವರು ಉಗ್ರರನ್ನು ಬಂಧಿಸಿದ್ದಲ್ಲದೇ 30 ಕೆಜಿ ಆರ್‌ಡಿಎಕ್ಸ್, 10 ಎಕೆ 47 ರೈಫಲ್ ಮತ್ತು 3200 ಸಜೀವ ಬುಲೆಟ್‌ಗಳನ್ನು ವಶಪಡಿಸಿಕೊಂಡಿತ್ತು.  
 
ಮಹಾರಾಷ್ಟ್ರ ರಾಜ್ಯದ ಭೀಢ್ ಜಿಲ್ಲೆಯ ನಿವಾಸಿಯಾಗಿರುವ ಉಗ್ರ ಅಬು ಜುಂದಾಲ್ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಮಾಳೆಗಾಂವ್‌ಗೆ ತೆರಳಿ ನಂತರ ಅಲ್ಲಿಂದ ಬಾಂಗ್ಲಾದೇಶಕ್ಕೆ ಪರಾರಿಯಾಗಿದ್ದ. ತದನಂತರ ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments