Webdunia - Bharat's app for daily news and videos

Install App

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬಿಜೆಪಿಯನ್ನು ಸೋಲಿಸುತ್ತದೆ: ರಾಹುಲ್

Webdunia
ಮಂಗಳವಾರ, 28 ಜನವರಿ 2014 (13:28 IST)
PTI
ಮುಂಬರುವ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನಕೇಂದ್ರ ಮೋದಿಯವರೊಂದಿಗೆ ನೇರ ಹಣಾಹಣಿಯಾದಲ್ಲಿ ಸೋಲುವ ಭೀತಿ ಕಾಡುತ್ತಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಹುಲ್, ವಿಪಕ್ಷಗಳನ್ನು ಎದುರಿಸು ತಾಕತ್ತು ಕಾಂಗ್ರೆಸ್ ಪಕ್ಷಕ್ಕಿದೆ. ಭಾರತೀಯ ರಾಜಕಾರಣದಲ್ಲಿ ಪ್ರಸ್ತುತವಿರುವ ಪರಿಸ್ಥಿತಿಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಮತ್ತು ತಂದೆ ರಾಜೀವ್ ಗಾಂಧಿಯವರ ಹತ್ಯೆಯ ನೋವನ್ನು ಮನಸ್ಸಿನಲ್ಲಿ ತುಂಬಿಕೊಂಡು ಬೆಳೆದಿದ್ದೇನೆ. ಅಜ್ಜಿ ಮತ್ತು ತಂದೆಯ ಸಾವನ್ನು ನೋಡಿದ್ದೇನೆ. ಅಜ್ಜಿ ಇಂದಿರಾ ಗಾಂಧಿ ಜೈಲಿಗೆ ಹೋಗಿರುವುದನ್ನು ನೋಡಿದ್ದೆ. ಇಂತಹ ಪರಿಸ್ಥಿತಿಗಳನ್ನು ಎದುರಿಸಿದ ನನಗೆ ಯಾವ ಮತ್ತು ಯಾರ ಭಯವು ಕಾಡುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments