Select Your Language

Notifications

webdunia
webdunia
webdunia
webdunia

ತಮಿಳುನಾಡು ವಿಧಾನಸಭೆ ಚುನಾವಣೆ: ಹತ್ತು ದಿನಗಳಲ್ಲಿ ಮೈತ್ರಿ ಕುರಿತು ಅಂತಿಮ ನಿರ್ಧಾರ ಎಂದ ಬಿಜೆಪಿ

ತಮಿಳುನಾಡು ವಿಧಾನಸಭೆ ಚುನಾವಣೆ: ಹತ್ತು ದಿನಗಳಲ್ಲಿ ಮೈತ್ರಿ ಕುರಿತು ಅಂತಿಮ ನಿರ್ಧಾರ ಎಂದ ಬಿಜೆಪಿ
ಮಧುರೈ , ಸೋಮವಾರ, 8 ಫೆಬ್ರವರಿ 2016 (17:07 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಡಿಎಂಕೆ ಮತ್ತು ಡಿಎಂಡಿಕೆ ಪಕ್ಷಗಳು ಒಂದಾಗಿ ಚುನಾವಣಾ ಕಣಕ್ಕೆ ಇಳಿಯಬೇಕು ಎನ್ನುವ ಸುಬ್ರಹ್ಮಣ್ಯಂ ಸ್ವಾಮಿ ಹೇಳಿಕೆ ಅವರ ವೈಯಕ್ತಿಕವಾಗಿದೆ ಎಂದು ಹಿರಿಯ ಬಿಜೆಪಿ ನಾಯಕ ಎಲ್,ಗಣೇಶನ್ ಹೇಳಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಗಳೊಂದಿಗೆ ಮೈತ್ರಿ ಹೊಂದಬೇಕು ಎನ್ನುವ ಕುರಿತಂತೆ ಬಿಜೆಪಿ ಹೈಕಮಾಂಡ್ ಚರ್ಚೆ ನಡೆಸುತ್ತಿದ್ದು ಮುಂದಿನ 10 ದಿನಗಳೊಳಗಾಗಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ಯಥಾರೀತಿ ಮೈತ್ರಿ ಮುಂದುವರಿಸಲಿವೆ. ಪಿಎಂಕೆ ಪಕ್ಷ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡುತ್ತಿದೆ. ಮತ್ತೊಂದೆಡೆ ಬಿಜೆಪಿಯೊಂದಿಗೆ ಮಾತುಕತೆ ಮುಂದುವರಿಸಿದೆ ಎಂದರು.
 
ಮುಂದಿನ 10 ದಿನಗಳೊಳಗಾಗಿ ಯಾವ ಯಾವ ಪಕ್ಷಗಳೊಂದಿಗೆ ವಿಧಾನಸಭೆ ಚುನಾವಣೆಗಾಗಿ ಮೈತ್ರಿ ಹೊಂದಬೇಕು ಎನ್ನುವುದು ಬಹಿರಂಗವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಗಣೇಶನ್ ತಿಳಿಸಿದ್ದಾರೆ.

Share this Story:

Follow Webdunia kannada