Select Your Language

Notifications

webdunia
webdunia
webdunia
webdunia

ಇನ್ಮುಂದೆ 21 ವಯಸ್ಸಿನವರೂ ʻಎಣ್ಣೆʼ ಹೊಡಿಯಬಹುದು!

ಇನ್ಮುಂದೆ 21 ವಯಸ್ಸಿನವರೂ ʻಎಣ್ಣೆʼ ಹೊಡಿಯಬಹುದು!
ಚಂಡೀಗಢ , ಗುರುವಾರ, 23 ಡಿಸೆಂಬರ್ 2021 (08:29 IST)
ಚಂಡೀಗಢ : ಹರಿಯಾಣ ಸರ್ಕಾರವು ಬುಧವಾರ ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದಿದ್ದು, ರಾಜ್ಯದಲ್ಲಿ ಮದ್ಯ ಸೇವನೆ ಮತ್ತು ಅದರ ಖರೀದಿ, ಮಾರಾಟದ ಕಾನೂನುಬದ್ಧ ವಯಸ್ಸನ್ನು 25ರಿಂದ 21ಕ್ಕೆ ಇಳಿಸಿದೆ.

ಹರಿಯಾಣ ಅಬಕಾರಿ (ತಿದ್ದುಪಡಿ) ಮಸೂದೆ- 2021 ಅನ್ನು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಈಚೆಗಷ್ಟೇ ಮದ್ಯ ಸೇವನೆ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಇಳಿಸಿದೆ.

ಅಬಕಾರಿ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲ್ ಅವರು ಮಸೂದೆ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ಹೊಸ ನಿಬಂಧನೆಗಳನ್ನು ಅಬಕಾರಿ ಕಾಯ್ದೆಯಲ್ಲಿ ಅಳವಡಿಸಿರುವುದರಿಂದ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯಲ್ಲಿ ಬದಲಾವಣೆ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜನರು ಈಗ ಹೆಚ್ಚು ವಿದ್ಯಾವಂತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕುಡಿಯುವ ವಿಚಾರದಲ್ಲೂ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹೆತ್ತವರ ವಿರುದ್ಧ ದೂರು ನೀಡಿದ ಮಗ! ಮುಂದೇನಾಯ್ತು?