Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿದ ಆರೋಪಿ ಅರೆಸ್ಟ್

ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿದ ಆರೋಪಿ ಅರೆಸ್ಟ್
ನವದೆಹಲಿ , ಮಂಗಳವಾರ, 24 ಜನವರಿ 2017 (14:24 IST)
ಕಳೆದ ಒಂಬತ್ತು ತಿಂಗಳುಗಳಿಂದ ಹದಿಹರೆಯದ ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರವೆಸಗಿದ 22 ವರ್ಷದ ಕಾಮುಕ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.
 
ಆರೋಪಿ, ಏಪ್ರಿಲ್ 2016ರಲ್ಲಿ ಮೊದಲ ಬಾರಿಗೆ ತನ್ನ 17 ವರ್ಷದ ಕಿರಿಯ ಸಹೋದರಿಯ ಮೇಲೆ ಮೊದಲ ಬಾರಿಗೆ ಅತ್ಯಾಚಾರವೆಸಗಿದ್ದಾನೆ. ನಂತರ 13 ವರ್ಷದ ಮತ್ತೊಬ್ಬ ಸಹೋದರಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.  
 
ನವದೆಹಲಿಯ ತಿಲಕ್‌ನಗರ್ ನಿವಾಸಿಯಾಗಿರುವ ಸಹೋದರಿಯರು ನಿರಂತರವಾಗಿ ಒಂಬತ್ತು ತಿಂಗಳುಗಳ ಕಾಲ ಅತ್ಯಾಚಾರ ಸಹಿಸಿಕೊಂಡ ನಂತರ ತನ್ನ ಗೆಳತಿಯೊಬ್ಬಳಿಗೆ ಅಣ್ಣ ನೀಡುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ನೋವು ತೋಡಿಕೊಂಡಿದ್ದಾಳೆ.
 
ಗೆಳತಿ ಕೂಡಲೇ ಎನ್‌ಜಿಓ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ತಂದೆಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ನಂತರ ಸಹೋದರಿಯರು ಗೆಳತಿ ಮತ್ತು ಆಕೆಯ ತಂದೆಯೊಂದಿಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಪೊಲೀಸರು ಆರೋಪಿ ಕಾಮುಕ ಅಣ್ಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
 
ಒಂದು ವೇಳೆ, ಅತ್ಯಾಚಾರವೆಸಗಿರುವ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಮನೆಯಿಂದ ಹೊರಹಾಕುವುದಾಗಿ ಆರೋಪಿ ತನ್ನ ಸಹೋದರಿಯರಿಗೆ ಬೆದರಿಕೆಯೊಡ್ಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಕಾಮನ್‌ ಸೆನ್ಸ್ ಇಲ್ಲದ ಮುಖ್ಯಮಂತ್ರಿ: ಯಡಿಯೂರಪ್ಪ