Publish Date: Wed, 22 Jun 2016 (13:40 IST)
Updated Date: Wed, 22 Jun 2016 (13:42 IST)
ಉತ್ತರಪ್ರದೇಶದಲ್ಲಿ ಸಿಡಿಲಿನ ಅಬ್ಬರಕ್ಕೆ 24 ಗಂಟೆಗಳಲ್ಲಿಯೇ 46 ಜನ ಬಲಿಯಾಗಿ 35 ಕ್ಕೂ ಹೆಚ್ಚಿನ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ವರ್ಷಧಾರೆಗೆ ಜನಜೀವನ ತತ್ತರಿಸಿದ್ದು, ಹಲವು ಗ್ರಾಮಗಳು ಜಲಾವೃತ್ತವಾಗಿವೆ. ನಿನ್ನೆ ಬೆಳಿಗ್ಗೆಯಿಂದ ರಾತ್ರಿಯವರಿಗೆ ಸುರಿದ ಮಳೆಯ ಸಂದರ್ಭದಲ್ಲಿ ಅಬ್ಬರಿಸಿದ ಸಿಡಿಲಿಗೆ 46 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.
ಸಿಡಿಲಿನಿಂದಾಗಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಬೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಿಡಿಲಿನಿಂದ ಮೃತರಾದವರಿಗೆ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಕೂಡಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅದಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ