Select Your Language

Notifications

webdunia
webdunia
webdunia
webdunia

ತೈಲ ಬೆಲೆಯೇರಿಸಿ ಸಂಗ್ರಹಿಸಿದ 25 ಲಕ್ಷ ಕೋಟಿ ರೂ. ಎಲ್ಲಿ?: ಕೇಂದ್ರಕ್ಕೆ ರಾಹುಲ್ ಪ್ರಶ್ನೆ

ತೈಲ ಬೆಲೆಯೇರಿಸಿ ಸಂಗ್ರಹಿಸಿದ 25 ಲಕ್ಷ ಕೋಟಿ ರೂ. ಎಲ್ಲಿ?: ಕೇಂದ್ರಕ್ಕೆ ರಾಹುಲ್ ಪ್ರಶ್ನೆ
ನವದೆಹಲಿ , ಶುಕ್ರವಾರ, 3 ಸೆಪ್ಟಂಬರ್ 2021 (11:31 IST)
ಕಣ್ಣೂರ್ : ನರೇಂದ್ರ ಮೋದಿ ನಾಯಕತ್ವದ ಕೇಂದ್ರ ಬಿಜೆಪಿ ಸರ್ಕಾರ ಜನಸಾಮಾನ್ಯರನ್ನು ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಕಾಮ್ಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ರೈತರು, ಸಣ್ಣಪುಟ್ಟ ವ್ಯಾಪಾರಿಗಳ ಜೇಬಿನಲ್ಲಿ ಅಳಿದುಳಿದ ರುಪಾಯಿಗಳನ್ನೂ ಮೋದಿ ಬಾಚಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಕಿಡಿ ಕಾರಿದ್ದಾರೆ.

ರಾಹುಲ್ ಅವರು ಕೇರಳದ ಕಣ್ಣೂರ್ ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯ ವರ್ಚುವಲ್ ಸಭೆಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭ ಅವರು ಕೇಂದ್ರದ ತೈಲ ಬೆಲೆಯೇರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗಿದ್ದರೂ ದೇಶದಲ್ಲಿ ಮಾತ್ರ ತೈಲ ಬೆಲೆ ಏರುತ್ತಲೇ ಇರುವ ಬಗ್ಗೆ ಅವರು ಅಚ್ಚರಿ ವ್ಯಕ್ತಪಡಿಸಿದರು.
ಇದೇ ವೇಳೆ ಇಂಧನ ಬೆಲೆಯೇರಿಕೆಯಿಂದ ಕೇಂದ್ರ ಸರ್ಕಾರ ೨೫ ಲಕ್ಷ ಕೋಟಿ ಹೆಚ್ಚುವರಿಯಾಗಿ ಸಂಗ್ರಹಿಸಿದ್ದು, ಈ ಹಣ ಏನಾಯಿತು ಎಂಬುದನ್ನು ಸರ್ಕಾರ ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ತೈಲ ಬೆಲೆಯೇರಿಕೆ ಮಾಡಿ ಸಂಗ್ರಹಿಸಿದ ಹೆಚ್ಚುವರಿ ಹಣವನ್ನು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಲ್ಲ ಎಂದು ರಾಹುಲ್ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ಯಕರ್ತರನ್ನು ಹುರಿದುಂಬಿಸಿದ ದೇವೇಗೌಡ