Select Your Language

Notifications

webdunia
webdunia
webdunia
webdunia

ಕಳ್ಳಭಟ್ಟಿ ಸೇವಿಸಿ ತಮಿಳುನಾಡಿನಲ್ಲಿ ಪ್ರಾಣ ಕಳೆದುಕೊಂಡ 29 ಮಂದಿ

Kallakurichi

Krishnaveni K

ಚೆನ್ನೈ , ಗುರುವಾರ, 20 ಜೂನ್ 2024 (10:02 IST)
Photo Credit: X
ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಎಂಬಲ್ಲಿ ಕಳ್ಳಭಟ್ಟಿ ಸೇವಿಸಿದ ಪರಿಣಾಮ 29 ಮಂದಿ ಸಾವನ್ನಪ್ಪಿದ್ದು, 60 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಎಂಕೆ ಸ್ಟಾಲಿನ್, ಘಟನೆ ತಡೆಯಲು ಸಾಧ್ಯವಾಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಆಸ್ಪತ್ರೆಗೆ ದಾಖಲಾದ ಹಲವು ಮಂದಿ ಆರೋಗ್ಯ ಗಂಭೀರವಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಘಟನೆ ಕುರಿತಂತೆ ಸಿಎಂ ಸ್ಟಾಲಿನ್ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ. ಅಸ್ವಸ್ಥರಾದವರನ್ನು ಕಲ್ಲಕುರಿಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ತಕ್ಷಣವೇ ಜಿಲ್ಲಾಧಿಕಾರಿ ಶ್ರವಣಕುಮಾರ್ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಎಂಎಸ್ ಪ್ರಶಾಂತ್ ಅವರನ್ನು ನೇಮಕ ಮಾಡಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸ್ಟಾಲಿನ್ ‘ಈ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲಾಗುವುದು. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಸಮಾಜವನ್ನು ಈ ರೀತಿ ಹಾಳುಮಾಡುವವರ ಬಗ್ಗೆ ಮಾಹಿತಿಯಿದ್ದಲ್ಲಿ ಸಾರ್ವಜನಿಕರು ಹಂಚಿಕೊಳ್ಳಬಹುದು. ತಕ್ಷಣವೇ ಅಂತಹವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೊಮೆಟೊ ಖರೀದಿ ಸಹವಾಸವೇ ಬೇಡ ಅಂತಿದ್ದಾರೆ ಗ್ರಾಹಕರು