Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ರ್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ

ಮಾಜಿ ಸಿಎಂ ರ್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ
ಅಮರಾವತಿ , ಸೋಮವಾರ, 2 ಜನವರಿ 2023 (15:02 IST)
ಅಮರಾವತಿ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಡೆಸುತ್ತಿರುವ ರ್ಯಾಲಿ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಇತ್ತೀಚೆಗಷ್ಟೇ 8 ಮಂದಿ ದಾರುಣ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ನಾಯ್ಡು ಅವರ ರ್ಯಾಲಿ ವೇಳೆ ಗುಂಟೂರು ಜಿಲ್ಲೆಯಲ್ಲಿ ಕಾಲ್ತುಳಿತಕ್ಕೆ ಮತ್ತೆ 3 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 2024ರ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯಾದ್ಯಂತ ನಾಯ್ಡು ಅವರು ಸರಣಿ ರಾಜಕೀಯ ಸಭೆಗಳನ್ನು ನಡೆಸುತ್ತಿದ್ದಾರೆ.

ರ್ಯಾಲಿ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ವೇಳೆ ತಳ್ಳಾಟ-ನೂಕಾಟ ಜೋರಾಗಿತ್ತು. ಕಾಲ್ತುಳಿತದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ.

ಗುಂಟೂರಿನಲ್ಲಾದ ಕಾಲ್ತುಳಿತ ದುರಂತದ ಬಗ್ಗೆ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಎಲ್ಲ ರೀತಿಯ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಸರ್ಕಾರದ ನೆರವಿನ ಭರವಸೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಗೆ ಅಡ್ಡಿ ಎಂದು ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ 17ರ ಹುಡುಗಿ!