Select Your Language

Notifications

webdunia
webdunia
webdunia
webdunia

ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ 3 ವರ್ಷ ಜೈಲು ಶಿಕ್ಷೆ

ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ 3 ವರ್ಷ ಜೈಲು ಶಿಕ್ಷೆ
ಚೆನ್ನೈ , ಸೋಮವಾರ, 27 ಏಪ್ರಿಲ್ 2020 (08:37 IST)
ಚೆನ್ನೈ : ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ 3 ವರ್ಷ ಜೈಲು ಶಿಕ್ಷೆ ನೀಡುವುದಾಗಿ ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.


ಕೆಲ ದಿನಗಳ ಹಿಂದೆ ಚೆನ್ನೈ ನಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ವೈದ್ಯರಿಬ್ಬರ ಅಂತ್ಯ ಸಂಸ್ಕಾರಕ್ಕೆ ಅಲ್ಲಿನ ಜನರು ಅಡ್ಡಿಪಡಿಸಿದ್ದರು. ಅಲ್ಲದೇ ಅಂತ್ಯ ಸಂಸ್ಕಾರಕ್ಕೆ ಬಂದವರ ಮೇಲೆ ಹಲ್ಲೆ ನಡೆಸಿದ್ದರು.


ಈ ಹಿನ್ನಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸುವುಸು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಿ ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಕನಿಷ್ಠ 1 ವರ್ಷದಿಂದ ಗರಿಷ್ಠ 3 ವರ್ಷ ಜೈಲಿ ಶಿಕ್ಷೆ ವಿಧಿಸುವುದಾಗಿ ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್ ಸಮಯ ಬದಲಾವಣೆ