ರಾತ್ರಿ ಊಟ ಸೇವಿಸಿದ ಬಳಿಕ 31 ವಿದ್ಯಾರ್ಥಿಗಳು ಅಸ್ವಸ್ಥ!

Webdunia
ಶುಕ್ರವಾರ, 23 ಸೆಪ್ಟಂಬರ್ 2022 (08:48 IST)
ಹೈದರಾಬಾದ್ : ಸರ್ಕಾರಿ ಶಾಲೆಯ ವಸತಿ ನಿಲಯದಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 31 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ತೆಲಂಗಾಣದ ಕುಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯಲ್ಲಿ ನಡೆದಿದೆ.
 
ಕಾಗಜನಗರ ಪಟ್ಟಣದ ಬಾಲಕರ ವಸತಿ ಶಾಲೆಯ ವಿದ್ಯಾರ್ಥಿಗಳು ಸೋಮವಾರ ರಾತ್ರಿ ಊಟ ಮಾಡಿದ ಬಳಿಕ ಹೊಟ್ಟೆನೋವು, ವಾಂತಿಭೇದಿ ಕಾಣಿಸಿಕೊಂಡಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ಮಾಧ್ಯಮದವರು ಶಾಲೆಗೆ ಬಂದಿದ್ದಾರೆ ಆದರೆ ಸಿಬ್ಬಂದಿ ಅವರನ್ನು ಆವರಣಕ್ಕೆ ಪ್ರವೇಶಿಸಲು ಬಿಡಲಿಲ್ಲ.

ಬಳಿಕ ವಸತಿ ನಿಲಯದ ಸಿಬ್ಬಂದಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಹಿಂಬಾಗಿಲಿನಿಂದ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ತಮ್ಮ ವಾಹನಗಳಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. 

ವಸತಿ ನಿಲಯದಲ್ಲಿ ಸಿಬ್ಬಂದಿ ಕೊರತೆಯಿರುವುದರಿಂದ ಅಡುಗೆ ಮಾಡುವ ಮುನ್ನ ಅಕ್ಕಿಯನ್ನು ತೊಳೆದಿರಲಿಲ್ಲ. ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಕ್ರಿಮಿ ಕೀಟಗಳು ಕಾಣಿಸಿಕೊಂಡಿರುವ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಸ್ಐಆರ್ ಲೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಆರ್ ಎಸ್ಎಸ್ ಗೆ ಬಿಗ್ ಶಾಕ್ ಕೊಟ್ಟ ಪ್ರಿಯಾಂಕ್ ಖರ್ಗೆ: ನಾನು ಯಾವುದಕ್ಕೂ ಹೆದರಲ್ಲ ಎಂದ ಗೃಹಸಚಿವ

ಬಸ್ ಎಕ್ಸ್ ಪ್ರೆಸ್ ನಂತೆ ಓಡುತ್ತಿದ್ದರೆ ರಸ್ತೆ ನೋಡಬೇಕಾದ ಡ್ರೈವರ್ ಮೊಬೈಲ್ ನಲ್ಲಿ ಮಗ್ನ: ಭಯಾನಕ Video

ಮುಂದಿನ ಸುದ್ದಿ
Show comments