Select Your Language

Notifications

webdunia
webdunia
webdunia
webdunia

370ನೇ ವಿಧಿ ರದ್ದಿನಿಂದ ಕಾಶ್ಮೀರದಲ್ಲಿ ಹಿಂಸೆ ಇಳಿಕೆ

370ನೇ ವಿಧಿ ರದ್ದಿನಿಂದ ಕಾಶ್ಮೀರದಲ್ಲಿ ಹಿಂಸೆ ಇಳಿಕೆ
ನವದೆಹಲಿ , ಶನಿವಾರ, 26 ಮಾರ್ಚ್ 2022 (09:02 IST)
ನವದೆಹಲಿ : ಜಮ್ಮು ಹಾಗೂ ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಹಿಂಸಾತ್ಮಕ ಕೃತ್ಯಗಳಲ್ಲಿ ಇಳಿಕೆ ಕಂಡುಬಂದಿದ್ದು,

ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ. ಕಾಶ್ಮೀರ ಬಜೆಟ್ ಮಂಡಿಸುವ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದ ನಿರ್ಮಲಾ, ‘ಕಾಶ್ಮೀರದಲ್ಲಿ 890 ಕೇಂದ್ರೀಯ ಕಾನೂನು ಅಳವಡಿಸಲಾಗಿದೆ.

ಇದರಿಂದ ಮೊದಲು ಹಕ್ಕುಗಳಿಂದ ವಂಚಿತರಾದವರು ಈಗ ಸರ್ಕಾರಿ ಉದ್ಯೋಗಗಳನ್ನು ಪಡೆಯಬಹುದಾಗಿದೆ.

ಆಸ್ತಿ ಖರೀದಿಸಬಹುದಾಗಿದೆ. ಇದಲ್ಲದೇ ಅನ್ಯಾಯ, ತಾರತಮ್ಯ ಮಾಡುವ 250 ರಾಜ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕಾಶ್ಮೀರದಲ್ಲಿ ಕೈಗಾರಿಕಾ ಸ್ಥಾಪನೆಯ ಹಾದಿ ಸುಲಭವಾಗಿದ್ದು, ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದರು.

ಅಲ್ಲದೇ 2021ರಲ್ಲಿ ಕಾಶ್ಮೀರದಲ್ಲಿ ಒಳನುಸುಳುವಿಕೆ ಪ್ರಮಾಣ ಶೇ. 33ಕ್ಕೆ ಇಳಿಕೆಯಾಗಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಶೇ. 90ರಷ್ಟುಇಳಿಕೆ, ಶೇ.61ರಷ್ಟುಭಯೋತ್ಪಾದಕ ಕೃತ್ಯಗಳಲ್ಲಿ ಇಳಿಕೆ ಹಾಗೂ ಉಗ್ರರಿಂದ ಅಪಹರಣಕ್ಕೊಳಗಾಗುವ ಪ್ರಮಾಣ ಶೇ.80 ರಷ್ಟುಇಳಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮರು ತನಿಖೆ ಕೋರಿ ಅರ್ಜಿ ?