Publish Date: Mon, 06 Sep 2021 (14:19 IST)
Updated Date: Mon, 06 Sep 2021 (14:22 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,948 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, 219 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,30,27,671ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,40,752ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 43,903 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,21,81,995ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,04,874ಕ್ಕೆ ಏರಿಕೆಯಾಗಿದೆ.