ಯುವತಿಯ ಮೇಲೆ ನಾಲ್ವರು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಮಾನಭಂಗ

ಮಹೋಬಾ
ಮಹೋಬಾ : 20 ವರ್ಷದ ಯುವತಿಯನ್ನು ನಾಲ್ವರು ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಸೇರಿ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದಿದೆ.


ಸಂತ್ರಸ್ತೆ ರಾತ್ರಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮನೆಗೆ ಬಂದ ನಾಲ್ವರು ಆಕೆಯನ್ನು ರೂಂಗೆ ಎಳೆದುಕೊಂಡು ಹೋಗಿ ಇಂತಹ ಕೃತ್ಯ ಎಸಗಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಯಾರಿಗೂ ಹೇಳಬಾರದೆಂದು ಯುವತಿಯನ್ನು ಬೆದರಿಸಿದ್ದಾರೆ.

ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಗಳವಾಡಿದ ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ