Select Your Language

Notifications

webdunia
webdunia
webdunia
webdunia

ಪಿಜ್ಜಾದ ಆಸೆತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು

ಪಿಜ್ಜಾದ ಆಸೆತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು
ನವದೆಹಲಿ , ಬುಧವಾರ, 17 ಅಕ್ಟೋಬರ್ 2018 (11:27 IST)
ನವದೆಹಲಿ : ಪಿಜ್ಜಾ ಕೊಡಿಸುವುದಾಗಿ ಆಸೆ ತೋರಿಸಿ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನವ ದೆಹಲಿಯಲ್ಲಿ ನಡೆದಿದೆ.

ವಿನೋಬಾನಗರದ ನಿವಾಸಿಯೊಬ್ಬ ದಾರಿಯಲ್ಲಿ ಹೋಗುತ್ತಿದ್ದ ಬಾಲಕಿಗೆ ಪಿಜ್ಜಾ ಕೊಡಿಸುವುದಾಗಿ ಹೇಳಿ ತನ್ನ ಮನೆಯೊಳಗೆ ಕರೆದುಕೊಂಡು ಹೋಗಿದ್ದಾನೆ.  ಅಲ್ಲಿ ಮಧ್ಯಪಾನ ಮಾಡುತ್ತಿದ್ದ ಮೂವರು ಗೆಳೆಯರೊಂದಿಗೆ ಸೇರಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಅಷ್ಟೇ ಅಲ್ಲದೇ  ಈ ವಿಚಾರವನ್ನು ಯಾರ ಬಳಿಯೂ ಹೇಳದಂತೆ ಅವರು ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದಾರೆ.

 

ಆದರೆ ಈ ವಿಚಾರವನ್ನು ತಾಯಿಗೆ ಆಕೆ ತಿಳಿಸಿದ ಕಾರಣ ತಾಯಿ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಆತ್ಮಹತ್ಯೆ ಮಾಡಿಕೊಂಡ ಕಬ್ಬಡಿ ಕೋಚರ್