Publish Date: Mon, 05 Jun 2017 (10:20 IST)
Updated Date: Mon, 05 Jun 2017 (10:25 IST)
ಶ್ರೀನಗರ:ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತ್ನಿಸಿದ್ದ ನಾಲ್ವರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಉತ್ತರ ಕಾಶ್ಮೀರದ ಸಂಬಾಲ್ ನ ಸಿಆರ್ ಪಿಎಫ್ ನ 45ನೇ ಬೆಟಾಲಿಯನ್ ಕ್ಯಾಂಪ್ ಮೇಲೆ ದಾಳಿಗೆ ಯತ್ನಿಸಿದಾಗ ಯೋಧರು ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನಾಲ್ವರು ಭಯೋತ್ಪಾದಕರು ಸೇನೆಯ ಗುಡೇಟಿಗೆ ಬಲಿಯಾಗಿದ್ದಾರೆ.
ಸಿಎಆರ್ ಪಿಎಫ್ ಯೋಧರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸಿಆರ್ ಪಿಎಫ್ ಡೆಪ್ಯುಟಿ ಜನರಲ್ ಇನ್ಸ್ ಪೆಕ್ಟರ್ ಎಂ.ದಿನಕರನ್ ತಿಳಿಸಿದ್ದಾರೆ. ಇನ್ನು ಸ್ಥಳದಲ್ಲಿ ನಾಲ್ಕು ಉಗ್ರರ ಶವಗಳು ಪತ್ತೆಯಾಗಿದೆ. ಅಲ್ಲದೆ, ಎಕೆ 47 ರೈಫಲ್ಸ್ ಗಳು, 1 ಯುಬಿಜಿಎಲ್ ಮತ್ತು ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.