Webdunia - Bharat's app for daily news and videos

Install App

ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗದಲ್ಲಿ ಕಲ್ಲು ತೂರಿದ ದುಷ್ಕರ್ಮಿಗಳು

Webdunia
ಸೋಮವಾರ, 17 ಜುಲೈ 2017 (19:22 IST)
ಮೂವರು ದುಷ್ಕರ್ಮಿಗಳು 40 ವರ್ಷದ ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಲ್ಲದೇ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಉದ್ಗೀರ್ ತಾಲೂಕಿನಲ್ಲಿ ವರದಿಯಾಗಿದೆ. 
 
ಕಳೆದ ಜುಲೈ 13 ರಂದು ಆಸ್ಪತ್ರೆಯಿಂದ ಮನೆಗೆ ಅಟೋದಲ್ಲಿ ಮರಳುತ್ತಿದ್ದ 40 ವರ್ಷ ವಯಸ್ಸಿನ ಮಹಿಳೆಯನ್ನು ಅಪಹರಿಸಿದ ಕಾಮುಕರು ಗ್ರಾಮದಿಂದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗುವಂತೆ ಅಟೋ ಚಾಲಕನನ್ನು ಒತ್ತಾಯಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಮಹಿಳೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಹಾಕಿದ ಆರೋಪಿಗಳು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಾರೆ. ನಂತರ ಒಬ್ಬ ಆರೋಪಿ ಆಕೆಯ ಗುಪ್ತಾಂಗದಲ್ಲಿ ಕಲ್ಲುಗಳನ್ನು ಹಾಕಿದರೆ ಮತ್ತೊಬ್ಬ ಆಕೆಯ ಮೈಮೇಲೆ ಮೂತ್ರ ಮಾಡಿ ಹೀನ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.
 
ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಉದ್ಗೀರ್ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಲಾತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ಆರೋಪಿಗಳ ವಿರುದ್ಧ ಹಲವು ಸೆಕ್ಷನ್‌ಗಳನ್ನು ದಾಖಲಿಸಲಾಗಿದ್ದು ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ