ಕಲ್ಲಿದ್ದಲು ತುರ್ತು ಸಾಗಾಟಕ್ಕೆ 42 ಪ್ರಯಾಣಿಕರ ರೈಲುಗಳು ರದ್ದು!

Webdunia
ಶುಕ್ರವಾರ, 29 ಏಪ್ರಿಲ್ 2022 (14:21 IST)
ದೇಶದಲ್ಲಿ ಕಲ್ಲಿದ್ದಲು ಅಭಾವದ ಹಿನ್ನೆಲೆಯಲ್ಲಿ ತುರ್ತು ಪೂರೈಕೆಗಾಗಿ 42 ಪ್ರಯಾಣಿಕರ ರೈಲುಗಳನ್ನು ರದ್ದುಗೊಳಿಸಿ ಕಲ್ಲಿದ್ದಲು ತುಂಬಿದ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ದೇಶದಲ್ಲಿ ಬಿಸಿಲು ಪ್ರಮಾಣ ಹೆಚ್ಚಾಗಿರುವುದರಿಂದ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ವಿದ್ಯುತ್‌ ಕೊರತೆ ಉಂಟಾಗಿದೆ. ರಾಜಧಾನಿ ದೆಹಲಿಯಲ್ಲಿ ಕೇವಲ ಒಂದು ದಿನಕ್ಕೆ ಆಗುವಷ್ಟು ಮಾತ್ರ ಕಲ್ಲಿದ್ದಲು ಸಂಗ್ರಹವಿದೆ.
ದೇಶದೆಲ್ಲೆಡೆ ಕಲ್ಲಿದ್ದಲು ಪೂರೈಕೆಗೆ ಯಾವುದೇ ಅಡ್ಡಿಯಾಗಬಾರದು ಎಂಬ ಹಿನ್ನೆಲೆಯಲ್ಲಿ ಹಲವು ಪ್ರಮುಖ ಪ್ರಯಾಣಿಕರ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಕಲ್ಲಿದ್ದಲು ಪೂರೈಕೆಗಾಗಿ ರೈಲ್ವೆ ಇಲಾಖೆ ಹೆಚ್ಚುವರಿ 1000 ಬೋಗಿಗಳನ್ನು ವ್ಯವಸ್ಥೆ ಮಾಡಿದೆ. ಅಲ್ಲದೇ ಇದು ಅತ್ಯಂತ ವೇಗವಾಗಿ ನಿಗದಿತ ಸ್ಥಳ ತಲುಪಿಸಲು ಯೋಜನೆಗಳನ್ನು ರೂಪಿಸಿಕೊಂಡಿದೆ.
ವಿದ್ಯುತ್‌ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಶೇ.17ರಷ್ಟು ಕಲ್ಲಿದ್ದಲು ಬೇಡಿಕೆ ದಿಢೀರ್‌ ಹೆಚ್ಚಾಗಿರುವುದರಿಂದ ಕಲ್ಲಿದ್ದಲು ಕೊರತೆ ಎದುರಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments