Publish Date: Thu, 02 Nov 2023 (10:03 IST)
Updated Date: Thu, 02 Nov 2023 (10:05 IST)
ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಮಾಹಿತಿ ಪಡೆದ ಅಪರಾಧ ದಳ, ಪೊಲೀಸ್ ಇಲಾಖೆಗೆ ಸೇರಿದ ವ್ಯಕ್ತಿಯೊಬ್ಬನನ್ನು ಗ್ರಾಹಕನಂತೆ ಕಳುಹಿಸಿದಾಗ ಯುವತಿಯರು 2000 ರೂಪಾಯಿ ನೀಡುವಂತೆ ಒತ್ತಾಯಿಸಿದ್ದಾರೆ. ಕೂಡಲೇ ಆತ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಮನೆ ಮೇಲೆ ದಾಳಿ ನಡೆಸಿದಾಗ ಐವರು ಯುವತಿಯರು ಹಾಗೂ ಪಿಂಪ್‌ನನ್ನು ಬಂಧಿಸಿದ್ದಾರೆ.
ನಗರದ ವಾರ್ದಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೇಲೆ ದಾಳಿ ಮಾಡಿದ ಪೊಲೀಸರು ಐವರು ಯುವತಿಯರು ಸೇರಿದಂತೆ ಪಿಂಪ್‌ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಇನ್ಸೆಪೆಕ್ಟರ್ ಪ್ರಕಾರ, ಮನೆಯ ಮಾಲೀಕ ಉಷಾ ಅಸೋಲೆ ಎನ್ನುವ ಮಹಿಳೆಗೆ ಬಾಡಿಗೆಗೆ ಕೊಟ್ಟಿದ್ದರು. ರಹಸ್ಯವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಉಷಾ ಹಲವು ವರ್ಷಗಳಿಂದ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಳೆ ಎಂದು ತಿಳಿಸಿದ್ದಾರೆ.
ಉಷಾ ಎನ್ನುವ ಆರೋಪಿ ಮಹಿಳೆ ಬ್ಯೂಟಿ ಪಾರ್ಲರ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯರಿಗೆ ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ತಳ್ಳಿದ್ದಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.