ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರು ಆಂಬ್ಯುಲೆನ್ಸ್‌ನಲ್ಲಿಯೇ 14 ನೇ ಮಗುವಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿದ್ದ ಸಿಬ್ಬಂದಿ ಸುರಕ್ಷಿತ ಹೆರಿಗೆಯನ್ನು ಮಾಡಿಸಿದ್ದಾರೆ.
ಮಹಿಳೆ ಮತ್ತು ಮಗುವನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಮತ್ತು ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಮಾಹಿತಿಯ ಪ್ರಕಾರ, ಪಿಲ್ಖುವಾದ ಮೊಹಲ್ಲಾ ಬಜರಂಗಪುರಿಯ ನಿವಾಸಿ ಇಮಾಮುದ್ದೀನ್ ಅವರ ಪತ್ನಿ 50 ವರ್ಷದ ಗುಡಿಯಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಅವರನ್ನು ಪಿಲ್ಖುವಾ ಸಿಎಚ್‌ಸಿಗೆ ಕರೆದೊಯ್ಯಲಾಯಿತು. ಅಲ್ಲಿನ ವೈದ್ಯರು ಅವರನ್ನು ಮೀರತ್ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದರು. . ಆರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್ ತೆರಳುವ ವೇಳೆ ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಹೆರಿಗೆಯ ನಂತರ, ತಾಯಿ ಮತ್ತು ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯ ನಂತರ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಘೋಷಿಸಿದರು. ಈ ಸಮಯದಲ್ಲಿ, ಮಹಿಳೆಯ 22 ವರ್ಷದ ಮಗ ಕೂಡ ಆಸ್ಪತ್ರೆಯಲ್ಲಿದ್ದನು.