Webdunia - Bharat's app for daily news and videos

Install App

ಆಂಬ್ಯುಲೆನ್ಸ್‌ನಲ್ಲಿಯೇ 14ನೇ ಮಗುವಿಗೆ ಜನ್ಮ ನೀಡಿದ 50 ವರ್ಷದ ಮಹಿಳೆ

Sampriya
ಭಾನುವಾರ, 30 ಮಾರ್ಚ್ 2025 (18:23 IST)
Photo Courtesy X
ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರು ಆಂಬ್ಯುಲೆನ್ಸ್‌ನಲ್ಲಿಯೇ 14 ನೇ ಮಗುವಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿದ್ದ ಸಿಬ್ಬಂದಿ ಸುರಕ್ಷಿತ ಹೆರಿಗೆಯನ್ನು ಮಾಡಿಸಿದ್ದಾರೆ.

ಮಹಿಳೆ ಮತ್ತು ಮಗುವನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಮತ್ತು ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಮಾಹಿತಿಯ ಪ್ರಕಾರ, ಪಿಲ್ಖುವಾದ ಮೊಹಲ್ಲಾ ಬಜರಂಗಪುರಿಯ ನಿವಾಸಿ ಇಮಾಮುದ್ದೀನ್ ಅವರ ಪತ್ನಿ 50 ವರ್ಷದ ಗುಡಿಯಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಅವರನ್ನು ಪಿಲ್ಖುವಾ ಸಿಎಚ್‌ಸಿಗೆ ಕರೆದೊಯ್ಯಲಾಯಿತು. ಅಲ್ಲಿನ ವೈದ್ಯರು ಅವರನ್ನು ಮೀರತ್ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದರು. . ಆರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್  ತೆರಳುವ ವೇಳೆ ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

 ಹೆರಿಗೆಯ ನಂತರ, ತಾಯಿ ಮತ್ತು ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯ ನಂತರ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಘೋಷಿಸಿದರು. ಈ ಸಮಯದಲ್ಲಿ, ಮಹಿಳೆಯ 22 ವರ್ಷದ ಮಗ ಕೂಡ ಆಸ್ಪತ್ರೆಯಲ್ಲಿದ್ದನು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments