Select Your Language

Notifications

webdunia
webdunia
webdunia
webdunia

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಜಮ್ಮು ಫ್ಲಡ್ ಲೈವ್ ಅಪ್‌ಡೇಟ್

Sampriya

ಶ್ರೀನಗರ , ಬುಧವಾರ, 27 ಆಗಸ್ಟ್ 2025 (17:49 IST)
Photo Credit X
ಶ್ರೀನಗರ: ಭೀಕರ ಪ್ರವಾಹಕ್ಕೆ ತುತ್ತಾಗಿರುವ ಜಮ್ಮು ಪ್ರದೇಶದ ನದಿಗಳ ತೀರ ಹಾಗೂ ತಗ್ಗು ಪ್ರದೇಶಗಳಿಂದ ಸುಮಾರು 5,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

ಜಮ್ಮು ಹಾಗೂ ಸಾಂಬಾ ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಸಿಲುಕಿದವರ ರಕ್ಷಣೆ ಮಾಡುವ ಕೆಲಸವನ್ನು ಎನ್‌ಡಿಆರ್‌ಎಫ್‌ ತಂಡದವರು ಮಾಡುತ್ತಿದ್ದಾರೆ ಎಂದು ಜಿಲ್ಲಾ ಆಡಳಿತ ತಿಳಿಸಿದೆ.  

ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಜಮ್ಮು ಪ್ರದೇಶ ಜಲಾವೃತವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಕುಡಿಯುವ ನೀರು, ವಿದ್ಯುತ್, ಇಂಟರ್‌ನೆಟ್‌ ಸೇವೆಗಳ ಪುನರ್ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮುವಿನಲ್ಲಿ ಕಳೆದ 24 ಗಂಟೆಯಲ್ಲಿ 380 ಮಿಮೀ ಮಳೆಯಾಗಿದೆ. 1910ರಲ್ಲಿ ಇಷ್ಟು ಪ್ರಮಾಣದ ಮಳೆ ಸುರಿದಿತ್ತು ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಮುಂಜಾಗ್ರತ ಕ್ರಮವಾಗಿ ನದಿ ತೀರ ಹಾಗೂ ತಗ್ಗು ಪ್ರದೇಶಗಳಿಂದ 5,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸೇನಾ ಯೋಧರು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು