Publish Date: Wed, 08 Jun 2022 (14:13 IST)
Updated Date: Wed, 08 Jun 2022 (14:14 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 5233 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ನಿನ್ನೆಗೆ ಹೋಲಿಸಿದರೆ ಶೇ.41ರಷ್ಟು ಹೆಚ್ಚಳವಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ 93 ದಿನಗಳ ನಂತರ ಮೊದಲ ಬಾರಿ 5000ಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 28,287ಕ್ಕೆ ಏರಿಕೆಯಾಗಿದೆ.
ಕಳೆದ ಒಂದು ದಿನದಲ್ಲಿ ದೇಶದಲ್ಲಿ 7 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 5,24,715ಕ್ಕೆ ಜಿಗಿತ ಕಂಡಿದೆ.