Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಳದಲ್ಲಿ 5 ನೇ ಹಂತದ ಮತದಾನ

ಪಶ್ಚಿಮ ಬಂಗಾಳದಲ್ಲಿ 5 ನೇ ಹಂತದ ಮತದಾನ
ಕೋಲ್ಕತ್ತಾ , ಶನಿವಾರ, 30 ಏಪ್ರಿಲ್ 2016 (15:56 IST)
ಪಶ್ಚಿಮ ಬಂಗಾಳದಲ್ಲಿ ಇಂದು ನಿರ್ಣಾಯಕ 5 ನೇ ಹಂತದ ಚುನಾವಣೆ ನಡೆಯುತ್ತಿದ್ದು  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಘಟಾನುಘಟಿಗಳು ಕಣದಲ್ಲಿದ್ದಾರೆ.
 
43 ಮಹಿಳೆಯರು ಸೇರಿದಂತೆ 349 ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆಯಲ್ಲಿ ಭದ್ರವಾಗಲಿದ್ದು, ದಕ್ಷಿಣ ಕೋಲ್ಕತ್ತಾ, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ. 
 
1.2 ಕೋಟಿ ಜನರು ಮತದಾನದ ಹಕ್ಕನ್ನು ಹೊಂದಿದ್ದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚುನಾವಣೆ ನಡೆಯುತ್ತಿದೆ. ಒಟ್ಟು 14,000 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 
 
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಣಕ್ಕಳಿದಿರುವ ಭವಾನಿಪುರ ಕ್ಷೇತ್ರದತ್ತ ಎಲ್ಲರ ಗಮನ ನೆಟ್ಟಿದ್ದು ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ನಾಯಕಿ ದೀಪಾ ದಾಸ್‌ಮುನ್ಸಿ ಅವರಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿದ್ದಾರೆ. 
 
ಇದೇ ಕ್ಷೇತ್ರದಿಂದ ಕಣಕ್ಕಿಳಿದಿರುವ ಮುಖ್ಯ ಅಭ್ಯರ್ಥಿ ಎಂದರೆ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಸೋದರನ ಮೊಮ್ಮಗ ಚಂದ್ರ ಕುಮಾರ್ ಬೋಸ್ (ಬಿಜೆಪಿ) ಅವರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಮುಗಿಯದ ರಾದ್ದಾಂತ: ಮುಂದುವರಿದ ಬಿಜೆಪಿ, ಕಾಂಗ್ರೆಸ್ ತಿಕ್ಕಾಟ