Webdunia - Bharat's app for daily news and videos

Install App

6 ವರ್ಷದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ 175 ಬಾರಿ ಅತ್ಯಾಚಾರವೆಸಗಿದ ಶಿಕ್ಷಕನ ಬಂಧನ

Webdunia
ಮಂಗಳವಾರ, 22 ಅಕ್ಟೋಬರ್ 2013 (12:58 IST)
PTI
ಕಳೆದ ಆರು ವರ್ಷಗಳ ಅವಧಿಯಲ್ಲಿ ಶಿಕ್ಷಕನೊಬ್ಬ 9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ 175 ಬಾರಿ ಅತ್ಯಾಚಾರವೆಸಗಿದ್ದ ಹೇಯ ಘಟನೆ ವರದಿಯಾಗಿದೆ.

ಪೊಲೀಸರು ಆರೋಪಿ ಶಿಕ್ಷಕನನ್ನು ಅತ್ಯಾಚಾರ ಪ್ರಕರಣದನ್ವಯ ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆದರೆ, ಆರೋಪಿ ತನ್ನ ಕುಟುಂಬದ ಸದಸ್ಯರ ಮೂಲಕ ಬಾಲಕಿಯ ಕುಟುಂಬದವರನ್ನು ಸಂಪರ್ಕಿಸಿ ಕೇಸ್ ವಾಪಸ್ ಪಡೆದಲ್ಲಿ ಬಾಲಕಿಯನ್ನು ಮದುವೆಯಾಗುವುದಾಗಿ ಆಮಿಷ ಒಡ್ಡಿದ್ದಾನೆ.

ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿದ್ದರಿಂದ ಬಾಲಕಿ ಕುಟುಂಬದ ಸದಸ್ಯರು ಕೇಸ್ ವಾಪಸ್ ಪಡೆದಿದ್ದಾರೆ. ಜಾಮೀನಿನ ಮೇಲೆ ಹೊರಬಂದ ನಂತರ ಆರೋಪಿ ಮದುವೆಯಾಗಲು ತಿರಸ್ಕರಿಸಿದ್ದಾನೆ. ಬಾಲಕಿಯ ಕುಟುಂಬದವರು ಮತ್ತೆ ನ್ಯಾಯಾಲಯದ ಮೊರೆಹೋಗಿ ಜಾಮೀನು ರದ್ದುಗೊಳಿಸುವಂತೆ ಮತ್ತೊಂದು ದೂರು ದಾಖಲಿಸಿದ್ದಾರೆ.

ಆರೋಪಿ ಶಿಕ್ಷಕ ಶೈಲೆಂದ್ರ ತಾನು ಮೂರನೇ ತರಗತಿಯಲ್ಲಿ ಓದುತ್ತಿರುವಾಗಲೇ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ. ಆರನೇ ತರಗತಿಗೆ ಬಂದ ಮೇಲೆ ನಗರದಲ್ಲಿರುವ ಹೋಟೆಲ್‌ಗಳಿಗೆ ಕರೆದುಕೊಂಡು ಹೋಗಿ ಹಲವಾರು ಬಾರಿ ಅತ್ಯಾಚಾರವೆಸಗಿದ್ದ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಬಗ್ಗೆ ಸುದ್ದಿ ತಿಳಿದ ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ