Webdunia - Bharat's app for daily news and videos

Install App

ಮಗುವಿನ ಮೇಲೆ ಮುದುಕನಿಂದ ನಿರಂತರ ಅತ್ಯಾಚಾರ

Webdunia
ಗುರುವಾರ, 22 ಸೆಪ್ಟಂಬರ್ 2016 (11:03 IST)
ಮೂರು ವರ್ಷದ ಮಗುವಿನ ಮೇಲೆ 60 ವರ್ಷದ ವೃದ್ಧ ಕಳೆದ ಒಂದು ವಾರದಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಹೇಯ ಘಟನೆ ನವದೆಹಲಿಯ ಅಮರ ಕಾಲೋನಿಯಲ್ಲಿ ನಡೆದಿದೆ. 
ಬುಧವಾರ ಈ ವಿಷಯ ಮಗುವಿನ ತಾಯಿಯ ಗಮನಕ್ಕೆ ಬಂದಿದ್ದು ತಕ್ಷಣ ಆಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ. 
 
ಬಾಲಕಿಯ ತಂದೆ ಸಮೂಹ ಸಂವಹನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಬಾಲಕಿಯ ಕುಟುಂಬ ಮತ್ತು ಆರೋಪಿ ಒಂದೇ ಕಟ್ಟಡದಲ್ಲಿ ಬಾಡಿಗೆಗಿದ್ದಾರೆ. ಬುಧವಾರ ಬೆಳಿಗ್ಗೆ ಬಾಲಕಿ ತನ್ನ ಗುಪ್ತಾಂಗದಲ್ಲಿ ನೋವಾಗುತ್ತಿರುವುದಾಗಿ ತಾಯಿಯ ಬಳಿ ದೂರಿದಾಗ ಘಟನೆ ಬೆಳಕಿಗೆ ಬಂದಿದೆ.
 
ಎರಡನೆಯ ಮಹಡಿಯಲ್ಲಿ ವಾಸವಾಗಿರುವ ಅಂಕಲ್ ತನ್ನನ್ನು ಆತನ ಮನೆಗೆ ಕರೆದೊಯ್ದಿದ್ದ ಎಂದಾಕೆ ನಡೆದ ಎಲ್ಲ ಘಟನೆಯನ್ನು ತಾಯಿ ಬಳಿ ಹೇಳಿಕೊಂಡಿದ್ದಾಳೆ.
 
ಆಘಾತಗೊಂಡ ತಾಯಿ ಪತಿಗೆ ವಿಷಯ ತಿಳಿಸಿ ತಕ್ಷಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. 
 
ಬಾಲಕಿಯನ್ನು ಎರಡಕ್ಕಿಂತ ಹೆಚ್ಚು ಬಾರಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ.
 
ಆರೋಪಿಯನ್ನು ಬಂಧಿಸಿ ಆತನ ಮೇಲೆ ಪೋಸ್ಕೋ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ. ಸಿಹಿತಿಂಡಿ ಮತ್ತು ಚಿಪ್ಸ್ ಕೊಡುವ ಆಮಿಷ ಒಡ್ಡಿ ಆತ ನನ್ನನ್ನು ತನ್ನ ಮನೆಗೆ ಕರೆದೊಯ್ಯುತ್ತಿದ್ದ ಎಂದು ಬಾಲಕಿ ತಿಳಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಮುಂದಿನ ಸುದ್ದಿ
Show comments