Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

65 ವರ್ಷದ ವೃದ್ದೆ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ!

webdunia
ಮಂಗಳವಾರ, 17 ಆಗಸ್ಟ್ 2021 (17:05 IST)
65 ವರ್ಷದ ವೃದ್ದೆ ಮೇಲೆ ನಾಲ್ವರು ಅಪ್ರಾಪ್ತರು ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನುಷ ಘಟನೆ ಮಧ್ಯಪ್ರದೇಶದ ಸಿಲಿಗುರಿಯಲ್ಲಿ ನಡೆದಿದೆ.

ಸಿಲಿಗುರಿ ಹೊರವಲಯದ ಜಯಂತ್ ಪೊಲೀಸ್ ಔಟ್ ಪೊಸ್ಟ್ ಬಳಿಯ ರೈಲ್ವೆ ಕ್ರಾಸಿಂಗ್ ಬಳಿ ಜನವರಿ 14ರಂದು ಈ ಹೇಯಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದ್ದು, ಮಾದಕ ವಸ್ತು ಸೇವಿಸಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹುಲ್ಲು ಉಜ್ಜುವ ನೈಸರ್ಗಿಕ ಉತ್ಪನ್ನ ಮಾರುತ್ತ ಜೀವನ ಸಾಗಿಸುತ್ತಿದ್ದ ವೃದ್ದೆ ಸೋದರಿ ಮನೆಯಿಂದ ಮರಳುತ್ತಿದ್ದಾಗ ಈ ಯುವಕರು ಅಡ್ಡಗಡ್ಡಿ ಕೃತ್ಯ ಎಸಗಿದ್ದಾರೆ. ಪೊಲೀಸರು ಘಟನಾ ಸ್ಥಳದಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಇದರಲ್ಲಿ ಇಬ್ಬರನ್ನು ವೃದ್ದೆ ಗುರುತು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಉಳಿದ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಕರಾವಳಿಯ 40 ಕಡೆ ಚಂಡಮಾರುತದ ಅಲರ್ಟ್ ವ್ಯವಸ್ಥೆ..!