Publish Date: Fri, 26 Aug 2022 (10:30 IST)
Updated Date: Fri, 26 Aug 2022 (09:32 IST)
ನವದೆಹಲಿ : ದೇಶದಲ್ಲಿ 5ಜಿ ಸೇವೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ 5ಜಿ ಸೇವೆ ಆರಂಭಿಸುತ್ತೇವೆ.
ಜೊತೆಗೆ 6ಜಿ ಸೇವೆ ಬಗ್ಗೆ ಈಗಾಗಲೇ ಕೆಲಸ ಆರಂಭವಾಗಿದ್ದು 2030ರ ಒಳಗಾಗಿ 6ಜಿ ಸೇವೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ತಂತ್ರಜ್ಞಾನಗಳ ಬೆಳವಣಿಗೆ ಸಾಕಷ್ಟು ವೇಗವಾಗಿ ನಡೆಯುತ್ತಿದೆ.
ಈಗಾಗಲೇ ಡ್ರೋನ್ಗಳನ್ನು ಕೃಷಿ ಮತ್ತು ಆರೋಗ್ಯ ವಿಭಾಗದಲ್ಲಿ ಬಳಕೆ ಮಾಡಲಾಗುತ್ತಿದೆ. ದೇಶದಲ್ಲಿ ಗೇಮಿಂಗ್ ಮತ್ತು ತಂತ್ರಜ್ಞಾನಗಳ ಬೆಳವಣಿಗೆಯಿಂದ ಯುವ ಸಮೂಹಕ್ಕೆ ಬೆಂಬಲ ನೀಡುತ್ತಿದ್ದೇವೆ ಎಂದಿದ್ದಾರೆ.