Webdunia - Bharat's app for daily news and videos

Install App

ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,000 ಕೋಟಿ ಅನುದಾನ ಹಂಚಿಕೆ: ಪ್ರಧಾನಿ ನರೇಂದ್ರ ಮೋದಿ

Sampriya
ಭಾನುವಾರ, 1 ಸೆಪ್ಟಂಬರ್ 2024 (12:03 IST)
ನವದೆಹಲಿ: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯದ ರೈಲು ಸಂಬಂಧಿತ ಯೋಜನೆಗಳಿಗೆ ₹ 7,000 ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ನಿಗದಿಪಡಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ವರ್ಷದ ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,000 ಕೋಟಿ ರೂ.ಗಿಂತ ಹೆಚ್ಚಿನ ಹಣ ನಿಗದಿಪಡಿಸಲಾಗಿದೆ. 2014 ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ, ಒಟ್ಟು 8 ವಂದೇ ಭಾರತ್‌ ರೈಲುಗಳು ಕರ್ನಾಟಕವನ್ನು ಸಂಪರ್ಕಿಸಿವೆ ಎಂದು ಮೂರು ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಉದ್ಘಾಟನೆ ವೇಳೆ ಮಾತನಾಡಿದರು.

ಈ ವರ್ಷ ತಮಿಳುನಾಡಿನ ರೈಲು ಬಜೆಟ್‌ಗೆ ₹ 6,000 ಕೋಟಿ ಹೆಚ್ಚು ಅನುದಾನವನ್ನು ಮೀಸಲಿಡಲಾಗಿದೆ. ಇದು 2014 ಕ್ಕಿಂತ ಏಳು ಪಟ್ಟು ಹೆಚ್ಚು. ಈಗ ನೂತನ ವಂದೇ ಭಾರತ್‌ ರೈಲಿನಿಂದಾಗಿ ತಮಿಳುನಾಡಿನಲ್ಲಿ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ ಎಂಟಕ್ಕೆ ಏರಲಿದೆ ಎಂದು ತಿಳಿಸಿದ್ದಾರೆ.

ಪ್ರತಿ ಮಾರ್ಗದಲ್ಲಿ ವಂದೇ ಭಾರತ್‌ಗೆ ಬೇಡಿಕೆ ಹೆಚ್ಚಾಗಿದೆ. ಸೆಮಿ ಹೈಸ್ಪೀಡ್ ರೈಲುಗಳ ಆಗಮನವು ಜನರಲ್ಲಿ ತಮ್ಮ ವ್ಯಾಪಾರ, ಉದ್ಯೋಗ ಮತ್ತು ಅವರ ಕನಸುಗಳನ್ನು ವಿಸ್ತರಿಸಲು ವಿಶ್ವಾಸವನ್ನು ತುಂಬಿದೆ. ದೇಶಾದ್ಯಂತ 102 ವಂದೇ ಭಾರತ್ ರೈಲು ಸೇವೆಗಳು ಕಾರ್ಯನಿರ್ವಹಿಸುತ್ತಿವೆ. ಇದುವರೆಗೆ 3 ಕೋಟಿಗೂ ಹೆಚ್ಚು ಜನರು ಈ ರೈಲುಗಳಲ್ಲಿ ಪ್ರಯಾಣಿಸಿದ್ದಾರೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರತಾಪಸಿಂಹ ಇಷ್ಟೆಲ್ಲಾ ಕಸರತ್ತು: ಡಿಕೆಶಿ ಲೇವಡಿ

ಒಂದು ವೇಳೆ ಗ್ರಹಣದ ಸಂದರ್ಭದಲ್ಲಿ ಊಟ ಸೇವಿಸಲೇ ಬೇಕಿದ್ದರೆ ಈ ರೀತಿ ಮಾಡಿ

ಲೇಟ್ ನೈಟ್ ಡ್ರಗ್ಸ್ ಪಾರ್ಟಿ: ನಗರದ ಪ್ರತಿಷ್ಠಿತ ಹೊಟೇಲ್ ಮೇಲೆ ಸಿಸಿಬಿ ದಾಳಿ

ಆಂಡಿ‌ ಬೈರನ್ ಜತೆಗಿನ ಲವ್ ಆಪೇರ್‌ ವೈರಲ್ ಬೆನ್ನಲ್ಲೇ ಕ್ರಿಸ್ಟಿನ್ ಗೆ ಬಿಗ್ ಶಾಕ್‌ಕೊಟ್ಟ ಪತಿ ಆಂಡ್ರ್ಯೂ

ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿ ಹೋರಾಟ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಮುಂದಿನ ಸುದ್ದಿ
Show comments