ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿಸಿದ ಪತಿರಾಯ

Webdunia
ಭಾನುವಾರ, 30 ಸೆಪ್ಟಂಬರ್ 2018 (08:57 IST)
ಚಂಡೀಗಢ : 22 ವರ್ಷದ  ನವವಿವಾಹಿತೆಯ ಮೇಲೆ ಆಕೆಯ ಪತಿ ಸೇರಿದಂತೆ 7 ಜನರು ಸಾಮೂಹಿಕ ಅತ್ಯಾಚಾರ ಎಸೆಗಿದ ಅಮಾನವೀಯ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ.


ಸಂತ್ರಸ್ತೆಗೆ ಸೆಪ್ಟೆಂಬರ್ 12ರಂದು ಮದುವೆ ಆಗಿತ್ತು. ಮದುವೆಯಾದ ಮಾರನೇ ದಿನ ಪತಿ ಹಾಗೂ ಆತನ ಕೆಲ ಸಂಬಂಧಿಕರು ಜ್ಯೂಸ್‍ನಲ್ಲಿ ನಶೆ ಔಷಧಿ ಹಾಕಿ ಪ್ರಜ್ಞೆ ತಪ್ಪಿಸಿ ರೂಮ್ ವೊಂದರಲ್ಲಿ ಕೂಡಿ ಹಾಕಿ ಪತಿ, ಆತನ ಸಹೋದರ, ಸಹೋದರಿಯ ಪತಿ ಅತ್ಯಾಚಾರ ಮಾಡಿದ್ದಾರೆ.


ಅಷ್ಟೇ ಅಲ್ಲದೆ ಸೆಪ್ಟೆಂಬರ್ 14ರಂದು ಪೂಜೆ ಮಾಡಲು ಬಂದಿದ್ದ ನಾಲ್ವರು ಪೂಜಾರಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸೆಗಿದ್ದಾರೆ. ಇದಕ್ಕೆ ಸಂತ್ರಸ್ತೆಯ ಪತಿಯ ತಾಯಿ, ತಂದೆ ಹಾಗೂ ಸಹೋದರಿ ಸಹಕಾರ ನೀಡಿದ್ದಾರೆ. ಅಲ್ಲದೇ ಅತ್ಯಾಚಾರದ ಬಳಿಕ ಮಹಿಳೆಯನ್ನು ಕೊಲೆ ಮಾಡಲು ಪ್ರಯತ್ನಿಸಿದ್ದರು ಎನ್ನಲಾಗಿದೆ.


ಈ ಕುರಿತು ಸಂತ್ರಸ್ತ ಮಹಿಳೆಯ ತಂದೆ ಸೆಪ್ಟೆಂಬರ್ 26ರಂದು ಕುರುಕ್ಷೇತ್ರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ವರದಿಯಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಕುರುಕ್ಷೇತ್ರ ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್ ಶೀಲವಂತಿ, ಸಂತ್ರಸ್ತೆಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬಂದ ತಕ್ಷಣವೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments