Publish Date: Thu, 18 Oct 2018 (08:38 IST)
Updated Date: Thu, 18 Oct 2018 (08:40 IST)
ನವದೆಹಲಿ: ಶಾಲೆಯಿಂದ ಮನೆಗೆ ಮರಳುತ್ತಿದ್ದ 7 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ಹರ್ಯಾಣದಲ್ಲಿ ನಡೆದಿದೆ.
ಆರೋಪಿಯನ್ನು ರಾಜು ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಸಿಹಿ ತಿನಿಸಿನ ಆಸೆ ತೋರಿಸಿ ಆರೋಪಿ ಬಾಲಕಿಯನ್ನು ಪುಸಲಾಯಿಸಿದ್ದ.
ಬಳಿಕ ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಬಾಲಕಿ ಅದು ಹೇಗೋ ಮನೆ ಸೇರಿದ್ದು, ತಕ್ಷಣ ಗಾಬರಿಗೊಂಡ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.