Webdunia - Bharat's app for daily news and videos

Install App

20 ವರ್ಷಗಳಿಂದ ಪುತ್ರಿಯ ಮೇಲೆ ರೇಪ್ ಎಸಗುತ್ತಿದ್ದ 70 ವರ್ಷದ ಆರೋಪಿ ಅರೆಸ್ಟ್

Webdunia
ಸೋಮವಾರ, 26 ಸೆಪ್ಟಂಬರ್ 2016 (15:07 IST)
ಕಳೆದ 20 ವರ್ಷಗಳಿಂದ ಪುತ್ರಿಯ ಮೇಲೆ ಅತ್ಯಾಚಾರವೆಸಗುತ್ತಿದ್ದ 70 ವರ್ಷ ವಯಸ್ಸಿನ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಫ್ಯಾಕ್ಟರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಪಿ, ಪುತ್ರಿಗೆ ಮಾದಕ ವಸ್ತುಗಳನ್ನು ಒತ್ತಾಯಪೂರ್ವಕವಾಗಿ ನೀಡಿ ಆಕೆ ಮತ್ತಿನಲ್ಲಿರುವ ಸಂದರ್ಭದಲ್ಲಿ ಅತ್ಯಾಚಾರವೆಸಗುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಯುವತಿ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಮಲತಾಯಿ ನಿರಂತರ ಕಿರುಕುಳ ನೀಡುತ್ತಿದ್ದುದಲ್ಲದೇ ತಂದೆ ಕೂಡಾ 1994ರಿಂದ ನಿರಂತರವಾಗಿ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
 
ಕಳೆದ 10 ವರ್ಷಗಳ ಹಿಂದೆ ವಿವಾಹವಾಗಿತ್ತು. ಆದರೆ, ಕೆಲವೇ ವರ್ಷಗಳ ನಂತರ ಪತಿ ವಿಚ್ಚೇದನ ನೀಡಿದ್ದರಿಂದ ತವರಿಗೆ ಮರಳಬೇಕಾಯಿತು. ಮನೆಯಲ್ಲಿ ನಾನು ಏಕಾಂಗಿಯಾಗಿರುವಾಗ ಬೆದರಿಕೆಯೊಡ್ಡಿ ತಂದೆ ಅತ್ಯಾಚಾರವೆಸಗುತ್ತಿದ್ದ ಎಂದು ತಿಳಿಸಿದ್ದಾಳೆ. 
 
ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರ, ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿದ್ದು, ಆತನ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ