Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ 70 ನೇ ಗಣರಾಜ್ಯೋತ್ಸವದ ಸಂಭ್ರಮ; ಧ್ವಜಾರೋಹಣ ಮಾಡಿದ ರಾಷ್ಟ್ರಪತಿ

ದೆಹಲಿಯಲ್ಲಿ 70 ನೇ ಗಣರಾಜ್ಯೋತ್ಸವದ ಸಂಭ್ರಮ; ಧ್ವಜಾರೋಹಣ ಮಾಡಿದ ರಾಷ್ಟ್ರಪತಿ
ನವದೆಹಲಿ , ಶನಿವಾರ, 26 ಜನವರಿ 2019 (10:12 IST)
ನವದೆಹಲಿ : ಇಂದು ದೇಶದೆಲ್ಲೆಡೆ 70 ನೇ ಗಣರಾಜ್ಯೋತ್ಸವದ ಸಂಭ್ರಮದ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲೂ ಸಿದ್ಧತೆ ಮಾಡಲಾಗಿದೆ.


ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಅವರು ಟ್ವೀಟರ್ ನಲ್ಲಿ ಶುಭಾಶಯ ಕೋರಿದ್ದಾರೆ. ಇದೀಗ ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ಆಚರಣೆಗೆ ಚಾಲನೆ ನೀಡಿದ್ದಾರೆ. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಿರುವ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಪೋಸ ಅವರು ಪ್ರಧಾನಿ ಅವರಿಗೆ ಸಾಥ್ ನೀಡಿದ್ದಾರೆ.

 

ದಟ್ಟ ಮಂಜು ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಕಾರ್ಯಕ್ರಮಗಳು ಆರಂಭವಾಗಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ. ವಿಜಯ ಚೌಕದಿಂದ ಪಥಸಂಚಲನ ಆರಂಭವಾಗಲಿದ್ದು, ರಾಜಪಥ, ತಿಲಕ್ ಮಾರ್ಗ, ಬಹದ್ದೂರ್ ಶಾ ಝಫರ್ ಮಾರ್ಗ, ನೇತಾಜಿ ಸುಭಾಷ್ ಮಾರ್ಗವಾಗಿ ಸಾಗಿ ಕೆಂಪುಕೋಟೆ ತಲುಪಲಿದೆ.

 

ದೆಹಲಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 25 ಸಾವಿರ ಭದ್ರತಾ ಸಿಬ್ಬಂದಿ, 36 ಮಹಿಳಾ ಕಮಾಂಡರ್ ಗಳು, ಮೊಬೈಲ್ ಹಿಟ್ ಟೀಂ, ಆಯಂಟಿ ಏರ್ ಕ್ರಾಫ್ಟ್ ಗನ್ಸ್ ಹಾಗೂ ಶಾರ್ಪ್ ಶೂಟರ್ ಗಳನ್ನು ನಿಯೋಜಿಸಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರ್ಕಾರದಿಂದ ಭಾರತ ರತ್ನ ಪ್ರಶಸ್ತಿಗೆ ಮೂವರ ಹೆಸರು ಘೋಷಣೆ; ಸಿದ್ಧಗಂಗಾ ಶ್ರೀಗಳಿಗಿಲ್ಲ ಭಾರತರ‍ತ್ನ