Publish Date: Thu, 02 May 2019 (08:27 IST)
Updated Date: Thu, 02 May 2019 (08:29 IST)
ನವದೆಹಲಿ: ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಗೆ ಚುನಾವಣಾ ಆಯೋಗ 72 ಗಂಟೆಗಳ ಕಾಲ ಸಾರ್ವಜನಿಕವಾಗಿ ಮಾತನಾಡದಂತೆ ನಿರ್ಬಂಧ ವಿಧಿಸಿದೆ.
ಬಾಬರಿ ಮಸೀದಿ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಇಂದು ಬೆಳಿಗ್ಗೆ 6 ಗಂಟೆಯಿಂದ ಮುಂದಿನ 72 ಗಂಟೆಗಳ ಕಾಲ ನಿರ್ಬಂಧ ವಿಧಿಸಲಾಗಿದೆ.
ಹೀಗಾಗಿ ಸಾಧ್ವಿ ಸಿಂಗ್ ಮುಂದಿನ ಎರಡು ದಿನ ಯಾವುದೇ ಸಾರ್ವಜನಿಕ ಸಮಾರಂಭದಲ್ಲಿ, ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುವಂತಿಲ್ಲ. ಇದಕ್ಕೆ ಮೊದಲು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೂ ಇದೇ ಶಿಕ್ಷೆ ಸಿಕ್ಕಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ