Webdunia - Bharat's app for daily news and videos

Install App

ಬ್ಲ್ಯೂಫಿಲ್ಮ್ ತೋರಿಸಿ 11ರ ಬಾಲೆಯ ಮೇಲೆ ಅತ್ಯಾಚಾರವೆಸಗಿದ 72ರ ವೃದ್ಧ

Webdunia
ಗುರುವಾರ, 9 ಫೆಬ್ರವರಿ 2017 (12:50 IST)
11 ವರ್ಷ ವಯಸ್ಸಿನ ಬಾಲಕಿಗೆ ಬ್ಲ್ಯೂ ಫಿಲ್ಮ್ ತೋರಿಸಿ ಕೆಲ ತಿಂಗಳುಗಳಿಂದ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ 72 ವರ್ಷ ವಯಸ್ಸಿನ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. 
 
ಕಾರ್‌ಪೆಂಟರ್‌ ವೃತ್ತಿಯಲ್ಲಿರುವ ಆರೋಪಿ ಕೃಷ್ಣ, ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ನಂತರ ಅತ್ಯಾಚಾರವೆಸಗುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಬಾಲಕಿಯ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದಾರೆ. ಬಾಲಕಿ ಶಾಲೆಯಿಂದ ಮನೆಗೆ ಬಂದ ನಂತರ ಆರೋಪಿ ಕೃಷ್ಣ ಆಕೆಯ ಮನವೊಲಿಸಿ ತನ್ನ ಮನೆಗೆ ತರೆದುಕೊಂಡು ಹೋಗಿ ಅತ್ಯಾಚಾರವೆಸಗುತ್ತಿದ್ದ ಎನ್ನಲಾಗಿದೆ.
 
ಬಾಲಕಿ ತನ್ನ ಪೋಷಕರಿಗೆ ವೃದ್ಧನ ಕಾಮಕೇಳಿಯ ಬಗ್ಗೆ ಮಾಹಿತಿ ನೀಡಿದರೂ ಪೋಷಕರು ಅದನ್ನು ನಂಬಿರಲಿಲ್ಲ. ಕೆಲ ದಿನಗಳ ಹಿಂದೆ ಬಾಲಕಿಯ ದೇಹದಲ್ಲಾಗುತ್ತಿರುವ ಬದಲಾವಣೆಗಳನ್ನ ಗಮನಿಸಿದ ಪೋಷಕರು ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರಂಭದಲ್ಲಿ ನಿರಾಕರಿಸಿದರೂ ನಂತರ ತನ್ನ ಕೀಳುಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments