Webdunia - Bharat's app for daily news and videos

Install App

8ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ಚಿದಂಬರಂ

Webdunia
ಗುರುವಾರ, 28 ಫೆಬ್ರವರಿ 2013 (12:10 IST)
PTI
PTI
8 ನೇ ಬಾರಿ ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು, ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾಗಿಸುವುದೇ ಯುಪಿಎ ಸರ್ಕಾರದ ಮೂಲ ಮಂತ್ರ ಎಂದು ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ 2013-14ನೇ ಸಾಲಿನ ಸಾಮಾನ್ಯ ಬಜೆಟ್ ಮಂಡಿಸುತ್ತಿರುವ ಚಿದಂಬರಂ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಯುಪಿಎ ಒತ್ತು ನೀಡಿದೆ. ಆರ್ಥಿಕತೆಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ತೈಲ ಹಾಗೂ ಚಿನ್ನದ ಮಾರುಕಟ್ಟೆಯಲ್ಲಿನ ಏರಿಳಿತದಿಂದ ಹಣದುಬ್ಬರದಲ್ಲಿ ವ್ಯತ್ಯಾಸವಾಗಿದೆ. ಆದರೂ ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ನಾವು ಸಫಲರಾಗಿದ್ದೇವೆ ಎಂದು ಹೇಳಿದರು.

ಜಾಗತಿಕ ಆರ್ಥಿಕ ಅಭಿವೃದ್ಧಿ ದರ ಶೇ.3.91ರಿಂದ ಶೇ.3.21ಕ್ಕೆ ಇಳಿಕೆಯಾಗಿದೆ. ಚೀನಾ ಮತ್ತು ಇಂಡೋನೇಷಿಯಾ ಹೆಚ್ಚಿನ ಆರ್ಥಿಕ ಪ್ರಗತಿ ಹೊಂದುತ್ತಿವೆ. ಈಗ ಭಾರತವೂ ಅದೇ ಹಾದಿಯಲ್ಲಿ ಸಾಗುತ್ತಿದೆ ಎಂದು ಅವರು ಹೇಳಿದರು.

11 ನೇ ಹಣಕಾಸು ಯೋಜನೆಯಲ್ಲಿ ಶೇ.8ರಷ್ಟು ಆರ್ಥಿಕ ಅಭಿವೃದ್ಧಿ ಸಾಧಿಸಲಾಗಿದೆ ಎಂದು ಚಿದಂಬರಂ ಲೋಕಸಭೆಗೆ ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments