ಅಗ್ನಿ ಅವಘಡ: ಎಂಟು ಮಂದಿ ಸಜೀವ ದಹನ

Webdunia
ಶನಿವಾರ, 29 ಅಕ್ಟೋಬರ್ 2016 (09:00 IST)
ವಡೊದರ: ಪಟಾಕಿ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಎಂಟು ಮಂದಿ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ವಘೊಡಿಯಾ ತಾಲೂಕಿನ ರುಸ್ತಂಪುರ ಗ್ರಾಮದಲ್ಲಿ ಸಂಭವಿಸಿದೆ.
 

 
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಅಲ್ಲದೆ, ಅಲ್ಲಿಯೇ ಪಕ್ಕದಲ್ಲಿ ಪಟಾಕಿಗಳನ್ನು ಉತ್ಪನ್ನ ಮಾಡಲಾಗುತ್ತಿತ್ತು. ಹೀಗೆ ಉತ್ಪನ್ನ ಮಾಡಲಾದ ಪಟಾಕಿಗಳನ್ನು ಅಂಗಡಿಗೆ ಸಾಗಿಸುವ ಸಂದರ್ಭದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ‌.
 
ಈ ಬೆಂಕಿಗೆ ಪಟಾಕಿ ಅಂಗಡಿ ಧಗಧಗನೆ ಉರಿದು, ಸಂಗ್ರಹಿಸಿಟ್ಟಿದ್ದ ಎಲ್ಲ ಪಟಾಕಿಗಳು ಒಮ್ಮೆಲೆ ಸ್ಫೋಟಗೊಂಡಿವೆ. ಈ ಬೆಂಕಿ ಜ್ವಾಲೆಗೆ ಪಕ್ಕದಲ್ಲಿರುವ ಎರಡು ಅಂಗಡಿಗಳು ಸಹ ಆಗುತಿಯಾಗುವೆ. ಪರಿಣಾಮ ಅಂಗಡಿಯ ಸಿಬ್ಬಂದಿ ಹಾಗೂ ಗ್ರಾಹಕರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಐವರು ತೀವ್ರ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments