ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆ, ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರಗಳು ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಪೂರ್ವ ದೆಹಲಿಯ ಮಾಂಡವಲಿ ಪ್ರದೇಶದಲ್ಲಿ 8 ವರ್ಷದ ಪುಟ್ಟ ಮಗುವಿನ ಮೇಲೆ ಭಾನುವಾರ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿದೆ.
ಮನೆಯ ಹೊರಗಡೆ ಮಲಗಿದ್ದ ಮಗುವನ್ನು ಅಪಹರಿಸಿ ಹತ್ತಿರದ ಕಾಡಿಗೆ ಹೊತ್ತೊಯ್ದು ಅತ್ಯಾಚಾರ ಎಸಗಲಾಗಿದೆ. ಒಂದು ಗಂಟೆಯ ನಂತರ ಆಕೆಯನ್ನು ಮನೆಯ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಮನೆಗೆ ಹಿಂತಿರುಗಿದ ಮಗುವಿನ ಗುಪ್ತಾಂಗದಲ್ಲಿ ರಕ್ತಸ್ರಾವವಾಗುತ್ತಿದ್ದುದನ್ನು ಕಂಡ ಆಕೆಯ ಮನೆಯವರು ತಕ್ಷಣ ಆಸ್ಪತ್ರೆಗೆ ಸೇರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಲ್ಲಿ ಇಬ್ಬರು ಬಾಲಕಿಯ ನೆರೆಯ ಮನೆಯವರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಗಳನ್ನು 21 ವರ್ಷದ ಅಮಿರ್. 19 ವರ್ಷದ ಭುರೆ ಮತ್ತು ಭೀಮ್ ಸೇನ್ ಎಂದು ಗುರುತಿಸಲಾಗಿದ್ದು ಸೋಮವಾರ ರಾತ್ರಿ ಅವರನ್ನು ಬಂಧಿಸಲಾಗಿದೆ. ಅವರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಹಿತರಕ್ಷಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.