Publish Date: Fri, 10 Mar 2017 (15:49 IST)
Updated Date: Fri, 10 Mar 2017 (15:51 IST)
ಅದೊಂದು ಬೆಂಗಳೂರೇ ಬೆಚ್ಚಿಬಿದ್ದಿದಂಥಾ ಘಟನೆ. ಹಾಡಹಗಲೇ ಬಸವೇಶ್ವರ ನಗರದ ರೌಡಿ ಶೀಟರ್ ಸುನೀಲ್ ಮನೆಗೆ ನುಗ್ಗಿದ್ದ ರೌಡಿಗಳ ಗುಂಪು ಹೊರಗೆಳೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಪ್ರಕರಣ ಸಂಬಂಧ ರೋಪಿಗಳ ಜಾಡು ಹಿಡಿದು ಹೊರಟಿದ್ದ ಪೊಲೀಸರು ನಾಗರಾಜ್ ಅಲಿಯಾಸ್ ಸ್ಪಾಟ್ ನಾಗ ಸೇರಿ 9 ಆರೋಪಿಗಳನ್ನ ನೆರೆಯ ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.
ಈ ಹಿಂದೆ ರೌಡಿ ಸುನೀಲನ ಗ್ಯಾಂಗ್ ಸ್ಪಾಟ್ ನಾಗನ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಹೆಂಡತಿ ಮಕ್ಕಳು ನಾಗನನ್ನ ತೊರೆದಿದ್ದರು. ಇದೇ ಪ್ರಕರಣದಲ್ಲಿ ಜೈಲಿಗೆ ಹೋಗಿ 10 ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ಬಂದಿದ್ದ ಸುನೀಲ ಈಗಲೂ ನಾಗನನ್ನ ಕುಂಟನೆಂದು ರೇಗಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ನಾಗ, ಕಳೆದ ಬುಧವಾರ ಸುನೀಲನ ಮನೆಗೇ ನುಗ್ಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.